

ಬೆಳ್ತಂಗಡಿ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ನಡುವೆಯೂ ನಿರಂತರ ಪ್ರಯತ್ನ ಮತ್ತು ಪ್ರಾಯೋಗಿಕ ಪರಿಶ್ರಮದಿಂದ ಉದ್ದಿಮೆದಾರರಾಗಿ ಬೆಳೆದಿರುವುದು ಕಾಲೇಜು ಹಾಗೂ ಉದ್ಯಮ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿ. ಬಹುತೇಕ ವಿದ್ಯಾರ್ಥಿಗಳು ಉದ್ಯೋಗ ಅರಸುತ್ತಿರುವಾಗ ಎಸ್‌ಡಿಎಂ ವಿದ್ಯಾರ್ಥಿಗಳು ಉದ್ಯೋಗ ಸೃಷ್ಟಿಸುವವರಾಗಿರುವುದು ಶ್ಲಾಘನೀಯ ಎಂದು ನಿಟ್ಟೆಯ ಅಟಲ್ ಇನ್‌ಕ್ಯುಬೇಶನ್ ಸೆಂಟರ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುನೀತ್ ರೈ ಹೇಳಿದರು.
ವಿದ್ಯಾರ್ಥಿಗಳು ತಯಾರಿಸಿದ 30ಕ್ಕೂ ಹೆಚ್ಚು ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಾಯಿತು.
2019ರಲ್ಲಿ ಯುಜಿಸಿಯ ಮಾರ್ಗಸೂಚಿಯಂತೆ ಬಿ.ವೋಕ್ ಕೋರ್ಸ್ ಆರಂಭವಾದಾಗ ಹಲವು ಸವಾಲುಗಳಿದ್ದವು. ಆದರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಮೇಲಿನ ಭರವಸೆಯಿಂದ ಧೈರ್ಯದಿಂದ ಮುಂದೆ ಹೆಜ್ಜೆ ಹಾಕಿತು. ಬಿ.ವೋಕ್ ಕೋರ್ಸ್‌ನ ವಿದ್ಯಾರ್ಥಿಗಳು ಉತ್ಪನ್ನಗಳ ತಯಾರಿಕೆ ಹಂತದವರೆಗೆ ಬೆಳೆದು ನಿಂತಿರುವುದು ಕೋರ್ಸ್ ಆರಂಭದ ಆಶಯ ಈಡೇರಿಸಿದಂತಾಗಿದೆ.
— ಪೂರನ್ ವರ್ಮ, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಸಿಇಒ