ಕೀಳರಿಮೆ ಬಿಟ್ಟು ಮನಸ್ಸಿನ ನಿಗ್ರಹ ಮುಖ್ಯ

ನೀಟ್ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಮೇಧಾಂಶ್ ಎನ್.ಬಿ. ಅವರನ್ನು ಪಾಲಕರ ಸಹಿತ ಗೌರವಿಸಲಾಯಿತು. ಪ್ರಮುಖರಾದ ಡಾ.ಸುಧಾಕರ ಶೆಟ್ಟಿ, ದಿನೇಶ್ ಎಂ.ಕೊಡವೂರು, ಸಂತೋಷ್, ಗಣೇಶ್ ಶೆಟ್ಟಿ ಮತ್ತಿತರರು ಇದ್ದರು.
ನೀಟ್ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಮೇಧಾಂಶ್ ಎನ್.ಬಿ. ಅವರನ್ನು ಪಾಲಕರ ಸಹಿತ ಗೌರವಿಸಲಾಯಿತು. ಪ್ರಮುಖರಾದ ಡಾ.ಸುಧಾಕರ ಶೆಟ್ಟಿ, ದಿನೇಶ್ ಎಂ.ಕೊಡವೂರು, ಸಂತೋಷ್, ಗಣೇಶ್ ಶೆಟ್ಟಿ ಮತ್ತಿತರರು ಇದ್ದರು.
Published on
ವಿಜಯವಾಣಿ ಸುದ್ದಿಜಾಲ ಕಾರ್ಕಳ
ನೀಟ್ ಪರೀಕ್ಷೆಗೆ ನಡೆಸುವ ತಯಾರಿಗಿಂತ ಕಠಿಣವಾದದ್ದು ಹೆತ್ತವರು ತಮ್ಮ ಮಕ್ಕಳನ್ನು ನೋಡಿಕೊಳ್ಳುವುದು. ಅಂತಹ ಹೆತ್ತವರನ್ನು ದೇವರಾಗಿ ಕಾಣಿರಿ. ಕೀಳರಿಮೆ ಬಿಟ್ಟು ಮನಸ್ಸಿನ ನಿಗ್ರಹ ಮತ್ತು ಸಮಯದ ಪರಿಪಾಲನೆ ಜತೆಗೆ ಮುಂದುವರಿಯಿರಿ ಎಂದು ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಹೇಳಿದರು.
ನೀಟ್ ಪರೀಕ್ಷೆಯಲ್ಲಿ ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಮೇಧಾಂಶ್ ಎನ್.ಬಿ. ಹಾಗೂ ಅನಿರುದ್ಧ್ ಆರ್.ಉಡುಪ ಅವರನ್ನು ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಸನ್ಮಾನಿಸಿ ಮಾತನಾಡಿದರು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.ಇ.ಒ. ದಿನೇಶ್ ಎಂ.ಕೊಡವೂರು ಹಾಗೂ ಅಜೆಕಾರು ಜ್ಞಾನಸುಧಾದ ಪ್ರಾಂಶುಪಾಲ ಸಂತೋಷ್ ವಾತನಾಡಿದರು. ನೀಟ್‌ನಲ್ಲಿ 500ಕ್ಕಿಂತ ಅಧಿಕ ಅಂಕಗಳನ್ನು ಪಡೆದುಕೊಂಡ ಉಡುಪಿ ಜ್ಞಾನಸುಧಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಮಣಿಪಾಲ ಜ್ಞಾನಸುಧಾ ಪ್ರಾಂಶುಪಾಲ ಗಣೇಶ್ ಶೆಟ್ಟಿ, ಉಡುಪಿ ಜ್ಞಾನಸುಧಾ ಪ್ರಾಂಶುಪಾಲ ಶ್ರೀನಿಧಿ ಭಾಗವತ್, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಡಾ.ಮಿಥುನ್ ಯು., ಉಪಪ್ರಾಂಶುಪಾಲ ಪ್ರಕಾಶ್ ಜೋಗಿ, ಉಡುಪಿ ಜ್ಞಾನಸುಧಾದ ಜೆಇಎ ಸಂಯೋಜಕ ಪ್ರವೀಣ್ ಜೋನ್ ಡಿ.ಅಲ್ಮೆಡಾ, ಎಲ್ಲ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕಿ ನಿಖಿ ಅನ್ನಾ ಜೋಸೆಫ್ ನಿರೂಪಿಸಿದರು.

ವಿದ್ಯಾರ್ಥಿಗಳ ಸಾಧನೆ


ಈ ಬಾರಿಯ ನೀಟ್ 2026ರ ಫಲಿತಾಂಶದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಒಟ್ಟು 528 ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು 600ಕ್ಕಿಂತ ಅಧಿಕ ಅಂಕ, 59 ವಿದ್ಯಾರ್ಥಿಗಳು 550ಕ್ಕಿಂತ ಅಧಿಕ ಹಾಗೂ 133 ವಿದ್ಯಾರ್ಥಿಗಳು 500ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ. ಸಂಸ್ಥೆಯ 260 ವಿದ್ಯಾರ್ಥಿಗಳು 90 ಪರ್ಸಂಟೈಲ್‌ಗಿಂತ ಅಧಿಕ ಅಂಕ ಪಡೆದಿದ್ದಾರೆ.

ನೀಟ್ ಪರೀಕ್ಷಾ ಸಾಧನೆಯನ್ನು ಸರ್ಕಾರ ಗುರುತಿಸುವಂತಾಗಬೇಕು. ಉಡುಪಿ ಜ್ಞಾನಸುಧಾ ಕಾಲೇಜು ದೈವಿಕ ಅನುಭೂತಿಯನ್ನು ನೀಡುತ್ತದೆ. ಜ್ಞಾನಸುಧಾದ ನಾಲ್ಕು ಸಂಸ್ಥೆಗಳು ಆರೋಗ್ಯಕರ ಸ್ಪರ್ಧೆಯೊಂದಿಗೆ ಕೆಲಸ ವಾಡುತ್ತಿವೆ.

— ದಿನೇಶ್ ಎಂ.ಕೊಡವೂರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.ಇ.ಒ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net