ವರದಿಗಾರರಿಗೆ ವಿಶ್ವಾಸಾರ್ಹತೆ ಉಳಿಸಿಕೊಳ್ಳುವುದು ಅಗತ್ಯ

ಸುಳ್ಯದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಸುಂದರ ಕೇನಾಜೆ ಅವರನ್ನು ಸನ್ಮಾನಿಸಲಾಯಿತು. ಡಾ.ಪ್ರಭಾತ್ ಬಲ್ನಾಡು, ಕೆವಿಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ವಿ.ಲೀಲಾಧರ್ ಮೊದಲಾದವರಿದ್ದರು.
ಸುಳ್ಯದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಸುಂದರ ಕೇನಾಜೆ ಅವರನ್ನು ಸನ್ಮಾನಿಸಲಾಯಿತು. ಡಾ.ಪ್ರಭಾತ್ ಬಲ್ನಾಡು, ಕೆವಿಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ವಿ.ಲೀಲಾಧರ್ ಮೊದಲಾದವರಿದ್ದರು.
Published on
ಸುಳ್ಯ: ಪತ್ರಿಕೆ ಮತ್ತು ಇತಿಹಾಸ ಓದುವುದರಿಂದ ಪರಿವರ್ತನೆ ಸಾಧ್ಯ. ಪತ್ರಕರ್ತರು ನೈಜ ಸಂಗತಿಗಳನ್ನು ದಾಖಲಿಸುವ ಮೂಲಕ ಒಂದು ರೀತಿಯಲ್ಲಿ ಇತಿಹಾಸ ರಚಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪತ್ರಕರ್ತರು ವಿಶ್ವಾಸಾರ್ಹತೆ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಮೂಡುಬಿದಿರೆ ಜೈನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಭಾತ್ ಬಲ್ನಾಡು ಹೇಳಿದರು.
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕನ್ನಡ ಭವನದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ, ಇತಿಹಾಸ ಮತ್ತು ಪತ್ರಿಕಾ ಮಾಧ್ಯಮಗಳ ಮಹತ್ವವನ್ನು ಯುವ ಜನಾಂಗಕ್ಕೆ ತಿಳಿಸುವ ಅನಿವಾರ್ಯತೆ ಇದೆ. ಆ ಮೂಲಕ ಯುವಜನರನ್ನು ಆಕರ್ಷಿಸುವ ಕೆಲಸ ಆಗಬೇಕಾಗಿದೆ ಎಂದರು.

ಕೆವಿಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ವಿ.ಲೀಲಾಧರ್ ಉದ್ಘಾಟಿಸಿದರು. ಪತ್ರಿಕಾ ಕ್ಷೇತ್ರದಲ್ಲಿ ನೀಡಿದ ಸೇವೆಗಾಗಿ ಸಾಹಿತಿ, ಅಂಕಣಕಾರ ಡಾ.ಸುಂದರ ಕೇನಾಜೆ ಅವರನ್ನು ಸನ್ಮಾನಿಸಲಾಯಿತು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ದ.ಕ. ಜಿಲ್ಲಾಧ್ಯಕ್ಷ ಪುಷ್ಪರಾಜ್ ಬಿ.ಎನ್. ಮಾತನಾಡಿದರು.
ತಾಲೂಕು ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಮಿತಿ ಸದಸ್ಯ ಗಿರೀಶ್ ಅಡ್ಪಂಗಾಯ, ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಉಪಸ್ಥಿತರಿದ್ದರು. ತಾಲೂಕು ಸಂಘದ ನಿರ್ದೇಶಕ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ಜಯಪ್ರಕಾಶ್ ಕುಕ್ಕೇಟ್ಟಿ ಅಭಿನಂದನಾ ಭಾಷಣ ಮಾಡಿದರು. ಕಾರ್ಯದರ್ಶಿ ಪದ್ಮನಾಭ ಮುಂಡೋಕಜೆ ಸ್ಪರ್ಧಾ ವಿಜೇತರ ಪಟ್ಟಿ ವಾಚಿಸಿದರು. ಮಿಥುನ್ ಕರ್ಲಪ್ಪಾಡಿ ವಂದಿಸಿದರು. ಪೂಜಾಶ್ರೀ ವಿತೇಶ್ ಕೋಡಿ ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net