ಜೆಸಿಐ ಬಂಟ್ವಾಳ ಅಧ್ಯಕ್ಷ ಕಿಶೋರ್ ಕುಮಾರ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ವಲಯ ಉಪಾಧ್ಯಕ್ಷ ಕಾಶೀನಾಥ ಗೋಗಟೆ, ಸುಹಾಸ್ ಮರಿಕೆ, ನಿಕಟ ಪೂರ್ವಾಧ್ಯಕ್ಷ ಗಣೇಶ್ ಕೆ.ಕುಲಾಲ್, ಪ್ರಾಜೆಕ್ಟ್ ಡೈರೆಕ್ಟರ್ ಸದಾನಂದ ಬಂಗೇರ, ಜೆಸಿಐ ಬಂಟ್ವಾಳ ಕಾರ್ಯದರ್ಶಿ ಕಿರಣ್ ಕುಮಾರ್, ವಲಯಾಡಳಿತ ಮಂಡಳಿ ಪದಾಧಿಕಾರಿಗಳು, ಜೆಸಿಐ ಬಂಟ್ವಾಳದ ಪೂರ್ವಾಧ್ಯಕ್ಷರು, ಸದಸ್ಯರು, ಆದಿದ್ರಾವಿಡ ಸಮಾಜ ಸೇವಾ ಸಂಘ ಪದಾಧಿಕಾರಿಗಳು ಉಪಸ್ಥಿತರಿದ್ದರು. ಜೆಸಿಐ ಬಂಟ್ವಾಳ ವತಿಯಿಂದ ಪೊಲೀಸ್ ಇಲಾಖೆಗೆ ಬ್ಯಾರಿಕೇಡ್ ಹಸ್ತಾಂತರಿಸಲಾಯಿತು.