

ಮಂಗಳೂರಿನ ಪ್ರೊಟೊ ಅಪ್ ಸ್ಕಿಲ್ನ ನಿರ್ದೇಶನದಲ್ಲಿ ನಡೆಯಲಿರುವ ಐದು ದಿನಗಳ ಸನಿವಾಸ ಶಿಬಿರದಲ್ಲಿ ಪ್ರಥಮ ಪಿಯು ಮುಗಿಸಿದ ವಿದ್ಯಾಪೋಷಕ್ನ 250 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಶಿಬಿರಾರ್ಥಿಗಳಲ್ಲಿ ಆತ್ಮಸ್ಥೈರ್ಯ, ಜೀವನ ಕೌಶಲ, ಆಂಗ್ಲಭಾಷಾ ಪ್ರೌಢಿಮೆ ಬೆಳೆಸಿ ಅವರಿಗೆ ಸಾಧಕರ ಪರಿಚಯದೊಂದಿಗೆ ಜೀವನ ಮೌಲ್ಯ ಕಲಿಸಲಾಗುವುದು.