ಮೇ 18ರಂದು ಕೊಡವೂರಿನಲ್ಲಿ ಬೃಹತ್​ ಉದ್ಯೋಗ ಮೇಳ

ಕಾರ್ಯದರ್ಶಿ ರೇವತಿ ನಾಡ್ಗಿರಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು
ಕಾರ್ಯದರ್ಶಿ ರೇವತಿ ನಾಡ್ಗಿರಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು
Published on
ಉಡುಪಿ: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯಲಿರುವ ಮಹಾರುದ್ರಯಾಗದ ಪ್ರಯುಕ್ತ ಮೇ 18ರಂದು ಕೊಡವೂರಿನ ವಿಪ್ರಶ್ರೀ ಸಭಾಭವನದಲ್ಲಿ ಬೃಹತ್​ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಉದ್ಯೋಗ ಮೇಳದ ಸಂಚಾಲಕಿ ಡಾ.ದಿವ್ಯಾ ರಾಣಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೇಳದಲ್ಲಿ 60ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, 6000ಕ್ಕೂ ಅಧಿಕ ಉದ್ಯೋಗ ಅವಕಾಶಗಳು ಲಭ್ಯ ಇವೆ. ಮ್ಯಾನೇಜ್​ಮೆಂಟ್​, ಎಂಜಿನಿಯರಿಂಗ್​, ಉತ್ಪಾದನಾ ವಲಯ, ಆರೋಗ್ಯ ಸೇವೆ, ಹೋಟೆಲ್​, ಬ್ಯಾಂಕಿಂಗ್​ ಮತ್ತು ಹಣಕಾಸು, ಮಾರಾಟ ಮತ್ತು ಮಾರುಕಟ್ಟೆ, ತಾಂತ್ರಿಕ ಸೇವೆಗಳು, ಲಾಜಿಸ್ಟಿಕ್ಸ್​ ಹಾಗೂ ಸೇವಾ ವಲಯ, ಕೌಶಲ್ಯ ವಿವಿಧ ಕ್ಷೇತ್ರಗಳ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ ಎಂದರು.
ಅಭ್ಯರ್ಥಿಗಳು ನೇರ ಸಂದರ್ಶನಗಳಲ್ಲಿ ಭಾಗವಹಿಸಬಹುದು. ಜೊತೆಗೆ ಸ್ವಂತ ಉದ್ಯಮದಲ್ಲಿ ಆಸಕ್ತಿ ಹೊಂದಿರುವವರಿಗಾಗಿ ಕಂಪನಿ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಬಹುದು. ಬೆಂಗಳೂರು, ಮೈಸೂರು, ಮಂಗಳೂರು ಮತ್ತು ಉಡುಪಿಯಲ್ಲಿ ಉದ್ಯೋಗ ಅವಕಾಶಗಳನ್ನು ಅರಿಯುವ ಅವಕಾಶ ಸಿಗಲಿದೆ. ಈ ಬಾರಿ ವಿಶೇಷವಾಗಿ ಸ್ಮಾರ್ಟ್​ ಅಪ್​ ಹಾಗೂ ಸ್ವಯಂ ಉದ್ಯೋಗ ಮಾರ್ಗದರ್ಶನ ಪಡೆಯಬಹುದು ಎಂದರು.
ಕಾರ್ಯದರ್ಶಿ ರೇವತಿ ನಾಡ್ಗಿರಿ ಮಾತನಾಡಿ, ಬೆಳಗ್ಗೆ 10.30ಕ್ಕೆ ಉದ್ಯೋಗ ಮೇಳವನ್ನು ಸ್ಪೀಕರ್​ ಯು.ಟಿ. ಖಾದರ್​ ಉದ್ಘಾಟಿಸಲಿದ್ದಾರೆ. ಮಾಹೆ ಸಹಕುಲಾಧಿಪತಿ ಡಾ. ಎಚ್​.ಎಸ್​. ಬಲ್ಲಾಳ್​, ಉದ್ಯಮಿ ಹರಿಪ್ರಸಾದ್​ ರೈ, ನಗರಸಭೆ ಪೌರಾಯುಕ್ತ ಮಹಂತೇಶ್​ ಹಂಗರಗಿ, ಅಮ್ಮುಂಜೆ ಪ್ರಭಾಕರ ನಾಯಕ್​ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಸಾತ್ವಿಕ್​ ಎಸ್​. ಆಚಾರ್ಯ, ಧೃವ್​ ರಾಜ್​ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net