ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆ ವತಿಯಿಂದ ಸೋಮವಾರ ವಾದಕ ದ್ರವ್ಯ ವಿರೋಧಿ ಜಾಗೃತಿ ಜಾಥಾ ನಡೆಯಿತು.
Published on:
Copied
Follow Us
ಬ್ರಹ್ಮಾವರ: ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸಿ, ಮಾದಕ ವಸ್ತು ಮುಕ್ತ ಸಮಾಜ ನಿರ್ಮಿಸಬೇಕಿದೆ. ಜತೆಗೆ ಸುತ್ತಮುತ್ತಲಿನವರಲ್ಲೂ ಜಾಗೃತಿ ಮೂಡಿಸುವ ಜವಾಬ್ದಾರಿಯೊಂದಿಗೆ ಉತ್ತಮ ನಾಗರಿಕ ಸಮಾಜ ನಿರ್ವಾಣಕ್ಕೆ ಕೈಜೋಡಿಸಬೇಕು ಎಂದು ಬ್ರಹ್ಮಾವರ ಪೊಲೀಸ್ ಠಾಣೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಮುಕ್ತಾ ಬಾಯಿ ಹೇಳಿದರು.
ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆ ವತಿಯಿಂದ ಸೋಮವಾರ ನಡೆದ ಮಾದಕ ದ್ರವ್ಯ ವಿರೋಧಿ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬ್ರಹ್ಮಾವರ ಪೊಲೀಸ್ ಠಾಣೆ ಪ್ರೊಬೇಷನರಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಆಶ್ರಿತಾ ಶೆಟ್ಟಿ ಪ್ರತಿಜ್ಞಾ ವಿಧಿ ಬೋಧಿಸಿದರು. ಸಂಸ್ಥೆ ಎಂಬ್ರಾಯಿಡರಿ, ಅಕೌಂಟಿಂಗ್, ೆಟೋಗ್ರಫಿಯ ಶಿಬಿರಾರ್ಥಿಗಳು ರುಡ್‌ಸೆಟ್ ಸಂಸ್ಥೆಯಿಂದ ಕೃಷಿ ವಿಜ್ಞಾನ ಕೇಂದ್ರದವರೆಗೆ ಜಾಗೃತಿ ಜಾಥಾ ನಡೆಸಿದರು.
ರುಡ್‌ಸೆಟ್ ಸಂಸ್ಥೆ ನಿರ್ದೇಶಕ ಡಾ.ಬೊಮ್ಮಯ್ಯ ಎಂ., ಲೀಡ್ ಡಿಸ್ಟ್ರಿಕ್ ಮ್ಯಾನೇಜರ್ ಹರೀಶ್ ಜಿ., ಉಪನ್ಯಾಸಕಿ ಚೈತ್ರಾ ಕೆ., ಕಚೇರಿ ಸಹಾಯಕ ಶಾಂತಪ್ಪ, ರವಿ ಮತ್ತಿತರರು ಉಪಸ್ಥಿತರಿದ್ದರು.