ಪತ್ರಕರ್ತರ ಜೀವನ ಶೈಲಿ ಬದಲಾವಣೆ ಅಗತ್ಯ: ಡಾ.ಸುಶೀಲ್​ ಜತ್ತನ್ನ

 ಲೋಂಬಾರ್ಡ್​ ಮೆಮೋರಿಯಲ್​(ಮಿಷನ್​) ಆಸ್ಪತ್ರೆ ನಿರ್ದೇಶಕ ಡಾ.ಸುಶೀಲ್​ ಜತ್ತನ್ನ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿದರು.
ಲೋಂಬಾರ್ಡ್​ ಮೆಮೋರಿಯಲ್​(ಮಿಷನ್​) ಆಸ್ಪತ್ರೆ ನಿರ್ದೇಶಕ ಡಾ.ಸುಶೀಲ್​ ಜತ್ತನ್ನ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿದರು.
Published on
ಉಡುಪಿ: ಪತ್ರಕರ್ತರು ಸದಾ ಕಾಲ ಒತ್ತಡದಿಂದ ಕಾರ್ಯ ನಿರ್ವಹಿಸುತ್ತಿರುತ್ತಾರೆ. ಇದರಿಂದ ಆರೋಗ್ಯದ ಕಡೆ ಹೆಚ್ಚು ಗಮನ ಕೊಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳಬೇಕು. ನಿಯಮಿತ ಆಹಾರ ಸೇವನೆ, ವ್ಯಾಯಾಮಕ್ಕೆ ಆದ್ಯತೆ ನೀಡಬೇಕು ಎಂದು ಲೋಂಬಾರ್ಡ್​ ಮೆಮೋರಿಯಲ್​(ಮಿಷನ್​) ಆಸ್ಪತ್ರೆ ನಿರ್ದೇಶಕ ಡಾ.ಸುಶೀಲ್​ ಜತ್ತನ್ನ ಹೇಳಿದ್ದಾರೆ.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಮೃತ್​ ಡಯಾಗ್ನಸ್ಟಿಕ್​ ಸೆಂಟರ್​ ಸಹಯೋಗದೊಂದಿಗೆ ಮಂಗಳವಾರ ಸಂಘದ ಸದಸ್ಯರಿಗೆ ಹಮ್ಮಿಕೊಳ್ಳಲಾದ ನಾಲ್ಕು ದಿನಗಳ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು, ಪತ್ರಿಕಾ ಭವನ ಸಮಿತಿ ಸಂಚಾಲಕ ಅಂಕಿತ್​ ಶೆಟ್ಟಿ, ಜಿಲ್ಲಾ ಸಂಘದ ಕೋಶಾಧಿಕಾರಿ ಹರೀಶ್​ ಕುಂದರ್​ ಉಪಸ್ಥಿತರಿದ್ದರು. ಅಮೃತ್​ ಡಯಾಗ್ನಸ್ಟಿಕ್​ ಸೆಂಟರ್​ ಮುಖ್ಯಸ್ಥ ಸತೀಶ್​ ನಾಯಕ್​ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ನಝೀರ್​ ಪೊಲ್ಯ ವಂದಿಸಿದರು. ಕಾಪು ತಾಲೂಕು ಪ್ರಧಾನ ಕಾರ್ಯದರ್ಶಿ ಪುಂಡಲೀಕ ಮರಾಠೆ ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net