ತಲವಾರು ಝಳಪಿಸಿದ ಆರೋಪಿಗೆ ನ್ಯಾಯಾಂಗ ಬಂಧನ

custody
custody
Published on
ಮಂಗಳೂರು: ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಶನಿವಾರ ತಲವಾರು ಝಳಪಿಸಿ ಭಯದ ವಾತಾವರಣ ಉಂಟು ಮಾಡಿದ್ದ ಯುವಕ ಬಂಟ್ವಾಳ ಮೂಲದ ರಾಜೇಶ್‌ಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಈತ ಬಸ್ ನಿಲ್ದಾಣದಲ್ಲಿರುವ ಮೊಬೈಲ್ ಅಂಗಡಿಯೊಂದಕ್ಕೆ ತೆರಳಿ ಅಲ್ಲಿ ಗಲಾಟೆ ಮಾಡಿ ತಲವಾರು ಝಳಪಿಸಿದ್ದ. ಬಳಿಕ ಆತನನ್ನು ಅಲ್ಲಿದ್ದ ಕೆಲವು ಯುವಕರು ಉಪಾಯದಿಂದ ಹಿಡಿದು ಪೊಲೀಸರಿಗೊಪ್ಪಿಸಿದ್ದರು. ಮೂಡುಬಿದಿರೆ ಪೊಲೀಸರು ವಶಕ್ಕೆ ಪಡೆದು ಬಳಿಕ ಆತನ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಾರೆ. ಅಮಲು ಪದಾರ್ಥ ಸೇವಿಸಿ ಕೃತ್ಯ ಎಸಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net