ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಅಟಲ್ ಉತ್ಸವ ಪ್ರಯುಕ್ತ ಬೀಚ್‌ನಲ್ಲಿ ಬೀಚ್ ಉತ್ಸವ, ಆಹಾರ ಮೇಳ, ಕ್ರೀಡೋತ್ಸವ, ಸಾಂಸ್ಕೃತಿಕ ಉತ್ಸವ ಸಹಿತ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ, ವಿಪಕ್ಷ ನಾಯಕರು, ಉಡುಪಿ ಮತ್ತು ದ.ಕ. ಸಂಸದರು, ಶಾಸಕರ ಸಹಿತ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.