ಲಂಚಕ್ಕೆ ಬೇಡಿಕೆ ವಿಡಿಯೋ; ಕಾರ್ಕಳ ಡಿವೈಎಸ್ಪಿ ಅಮಾನತು

(ಸಾಂದರ್ಭಿಕ ಚಿತ್ರ)
(ಸಾಂದರ್ಭಿಕ ಚಿತ್ರ)
Published on

* ಕ್ರಮ ಕೈಗೊಂಡ ಉಡುಪಿ ಎಸ್ಪಿ ಹರಿರಾಮ್​ ಶಂಕರ್​

* ಪಿಐ ಸಂದೀಪ್​, ಸಿಬ್ಬಂದಿಯೂ ಸಸ್ಪೆಂಡ್​

ಉಡುಪಿ: ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಡಿಯೋಕ್ಕೆ ಸಂಬಂಧಿಸಿ ಕಾರ್ಕಳ ಡಿವೈಎಸ್ಪಿ, ವೃತ್ತ ನಿರೀಕ್ಷಕ ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್​ ಇಲಾಖೆ ಅಮಾನತು ಮಾಡಿದೆ.
ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್​, ಕಾರ್ಕಳ ಪಿಐ ಸಂದೀಪ್​ ಹಾಗೂ ಡಿವೈಎಸ್ಪಿ ಕಚೇರಿಯ ಸಿಬ್ಬಂದಿ ಶಿವಾನಂದ್​ ಅಮಾನತುಗೊಂಡವರು.
ಪ್ರಕರಣವೊಂದಕ್ಕೆ ಸಂಬಂಧಿಸಿ ಹಣದ ಬೇಡಿಕೆ ಇಟ್ಟಿರುವ ಕುರಿತ ವಿಡಿಯೋ ಮತ್ತು ಆರೋಪಗಳ ಆಧಾರದ ಮೇಲೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್​ ಅಧೀಕ್ಷಕ ಸುಧಾಕರ್​ ನಾಯ್ಕ್​ ಪ್ರಾಥಮಿಕ ವಿಚಾರಣೆ ನಡೆಸಿದ್ದರು. ಅದರ ಆಧಾರದ ಮೇಲೆ ಮೂವರನ್ನೂ ಇಲಾಖಾ ಶಿಸ್ತು ಕ್ರಮ ಬಾಕಿ ಇರುವವರೆಗೆ ಅಮಾನತು ಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್​ ವರಿಷ್ಠ ಹರಿರಾಮ್​ ಶಂಕರ್​ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net