ಕಾರ್ಕಳ: ಆಧುನಿಕ ಯುಗದಲ್ಲಿ ದೈಹಿಕ ಸದೃಢತೆ ಕಡಿಮೆಯಾಗುತ್ತಿದ್ದು, ಕ್ರೀಡೆಯು ದೈಹಿಕವಾಗಿ ಸದೃಢರನ್ನಾಗಿಸುವುದರ ಜತೆಗೆ ಶಿಸ್ತು, ಸಮಯ ಪ್ರಜ್ಞೆ, ನಾಯಕತ್ವ ಗುಣ ಬೆಳೆಸುತ್ತದೆ ಎಂದು ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕ್ರೀಡಾ ನಿರ್ದೇಶಕ ಡಾ.ಗಣೇಶ್ ಪೂಜಾರಿ ಹೇಳಿದರು.
ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಕುದುರೆಮುಖ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಡಿ.ದಿನೇಶ್, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ಎಂ.ಕೊಡವೂರು ಮಾತನಾಡಿದರು. ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನೆರವೇರಿತು. ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳನ್ನು ಅಭಿನಂದಿಸಲಾಯಿತು.
ಸಮಾರೋಪ ಸಮಾರಂಭದಲ್ಲಿ ಶ್ರೀಮದ್ ಭುವನೇಂದ್ರ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಸಂಜಯ್ ಕುವಾರ್ ಮಾತನಾಡಿದರು. ಕಾರ್ಕಳ ಜ್ಞಾನಸುಧಾ ಆಂಗ್ಲ ವಾಧ್ಯಮ ಶಾಲೆ ಮತ್ತು ಪ್ರೌಢಶಾಲೆ ಉಪ ಪ್ರಾಂಶುಪಾಲೆ ವಾಣಿ ಕೆ., ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ, ಹಿತೈಷಿಗಳಾದ ತ್ರಿವಿಕ್ರಮ ಕಿಣಿ, ದೇವೇಂದ್ರ ನಾಯಕ್, ಕುಕ್ಕುಂದೂರು ಗ್ರಾಪಂನ ಮಾಜಿ ಅಧ್ಯಕ್ಷ ಹಮತುಲ್ಲ ಉಪಸ್ಥಿತರಿದ್ದರು. ಮನೀಶ್ ಪ್ರಾರ್ಥಿಸಿದರು. ವಿದ್ಯಾ ಕಾರ್ಯಕ್ರಮ ನಿರೂಪಿಸಿದರು.
ಆರೋಗ್ಯಕರ ಮತ್ತು ಕ್ರಿಯಾಶೀಲರಾಗಲು ಕ್ರೀಡೆ ನೆರವಾಗುತ್ತದೆ. ಶಿಕ್ಷಣ ಕೇವಲ ಅಂಕ ಗಳಿಕೆಗೆ ಸೀಮಿತವಾಗಿರದೆ, ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ಸಾಧನೆ ವಾಡಲು ಸ್ಫೂರ್ತಿಯಾಗಿದೆ. ಕ್ರೀಡೆಯಿಂದ ಯಶಸ್ಸಿನ ಉತ್ತುಂಗಕ್ಕೆ ಏರಲು ಸಾಧ್ಯ ಎಂದರು.
ಜಿ.ಡಿ.ದಿನೇಶ್, ಕುದುರೆಮುಖ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ