ಕಾಸರಗೋಡು ವೈದ್ಯಕೀಯ ಕಾಲೇಜು ಕಾಮಗಾರಿ ಶೀಘ್ರ ಪೂರ್ಣ

 ಕಾಸರಗೋಡು ವೈದ್ಯಕೀಯ ಕಾಲೇಜು ಆಸ್ಪತ್ರೆಯ ಕಾಮಗಾರಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಕಲ್ಲಟ್ರ ಮಾಹಿನ್ ಮಾತನಾಡಿದರು. ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್, ಪ್ರಾಂಶುಪಾಲ ಎ.ಅರುಣ್‌ಕುಮಾರ್ ಇತರರು ಇದ್ದರು.
ಕಾಸರಗೋಡು ವೈದ್ಯಕೀಯ ಕಾಲೇಜು ಆಸ್ಪತ್ರೆಯ ಕಾಮಗಾರಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಕಲ್ಲಟ್ರ ಮಾಹಿನ್ ಮಾತನಾಡಿದರು. ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್, ಪ್ರಾಂಶುಪಾಲ ಎ.ಅರುಣ್‌ಕುಮಾರ್ ಇತರರು ಇದ್ದರು.
Published on
ಕಾಸರಗೋಡು: ಉಕ್ಕಿನಡ್ಕದಲ್ಲಿ ನಿರ್ಮಾಣವಾಗುತ್ತಿರುವ ಕಾಸರಗೋಡು ವೈದ್ಯಕೀಯ ಕಾಲೇಜಿನ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ವೈದ್ಯಕೀಯ ಕಾಲೇಜಿನಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆ, ಹೊಸ ಆಡಳಿತ ಬ್ಲಾಕ್ ಮತ್ತು ಸೀವೇಜ್ ಸ್ಥಾವರ ಹೊಸದಾಗಿ ಪ್ರಾರಂಭಿಸಲು ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕಲ್ಲಟ್ರ ಮಾಹಿನ್ ತಿಳಿಸಿದರು.
ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ನೇತೃತ್ವದಲ್ಲಿ ಕಾಸರಗೋಡು ವೈದ್ಯಕೀಯ ಕಾಲೇಜಿನಲ್ಲಿ ನಡೆಸಿದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಎಂಡೋಸಲ್ಫಾನ್ ಸಂತ್ರಸ್ತರಿಗೆ ನೆರವಾಗುವ ನಿಟ್ಟಿನಲ್ಲಿ ನರರೋಗ ವಿಭಾಗ ತೆರೆಯಲಾಗುವುದು. ಅಸೋಸಿಯೇಟ್ ಪ್ರೊಫೆಸರ್ ಸೇರಿದಂತೆ ಸೂಪರ್‌ಸ್ಪೆಷಾಲಿಟಿ ಚಿಕಿತ್ಸೆಗೆ ಅಗತ್ಯ ಹುದ್ದೆಗಳನ್ನು ಹಂಚಿಕೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಶಾಸಕ ತಿಳಿಸಿದರು.
ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್, ಕಾಲೇಜಿನ ಆಂತರಿಕ ರಸ್ತೆಗಳು ಮತ್ತು ಆಸ್ಪತ್ರೆ ಕಟ್ಟಡಗಳ ಕಾಮಗಾರಿ ತ್ವರಿತಗೊಳಿಸಲು ಸಂಬಂಧಪಟ್ಟವರಿಗೆ ಸೂಚನೆ ನೀಡಿದರು.
ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಎ.ಅರುಣ್‌ಕುಮಾರ್, ಉಪ ಪ್ರಾಂಶುಪಾಲ ಪಿ.ಜಿ.ಸಿಂಧು, ವೈದ್ಯಕೀಯ ಕಾಲೇಜು ಅಧೀಕ್ಷಕ ಡಾ.ಪ್ರವೀಣ್, ನರ್ಸಿಂಗ್ ಕಾಲೇಜು ಉಪ ಪ್ರಾಂಶುಪಾಲೆ ಶೋಭಾ, ಸಹಾಯಕ ಜಿಲ್ಲಾಧಿಕಾರಿ ಲಿಪು ಎಸ್.ಲಾರೆನ್ಸ್, ಕೇರಳ ಜಲ ಪ್ರಾಧಿಕಾರ, ಕೆಎಸ್‌ಇಬಿ, ಪಿಡಬ್ಲುೃಡಿ, ಕೆಐಟಿ ಕಂಪನಿ ಮತ್ತು ಯುಎಲ್‌ಸಿಸಿ ಹಾರ್ಬರ್ ಇಂಜಿನಿಯರಿಂಗ್ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net