ಉಡುಪಿ: ಪಶ್ಚಿಮಘಟ್ಟ ತಪ್ಪಲು ಪ್ರದೇಶದ ನಿವಾಸಿಗಳಲ್ಲಿ ಆತಂಕ ಮೂಡಿಸಿರುವ ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು. ಹೊಸದಾಗಿ ಸರ್ವೆ ನಡೆಸಿ ಜನವಸತಿ ಪ್ರದೇಶ ವಿರಹಿತಗೊಳಿಸಬೇಕು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರದಿ ಜಾರಿಯಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದ 34 ಗ್ರಾಮಗಳ ನಿವಾಸಿಗಳಿಗೆ ತೊಂದರೆಯಾಗುವ ಸಾಧ್ಯತೆಯಿದೆ. ಗ್ರಾಮಸಭೆ ನಡೆಸದೆ ಕೇವಲ ವೈಮಾನಿಕ ಸಮೀಕ್ಷೆ ಆಧರಿಸಿ ನಿರ್ಧಾರ ಕೈಗೊಳ್ಳುವುದು ಸರಿಯಲ್ಲ ಎಂದು ಅವರು ಹೇಳಿದರು.
ಸಿಎಂ ಅಹವಾಲು ಸ್ವೀಕಾರ
ಸೆ.18ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೆಬ್ರಿಗೆ ಆಗಮಿಸಿ ಕಸ್ತೂರಿರಂಗನ್ ವರದಿ ಬಾಧಿತ ಪ್ರದೇಶಗಳ ಜನರ ಅಹವಾಲು ಸ್ವೀಕರಿಸಲಿದ್ದಾರೆ. ನೂರಾರು ವರ್ಷಗಳಿಂದ ಭತ್ತ, ಅಡಿಕೆ, ತೆಂಗು, ತರಕಾರಿ ಬೆಳೆಗಳನ್ನು ಬೆಳೆದು ಕೃಷಿಕಾಯಕದಲ್ಲಿ ತೊಡಗಿಸುವ ಜನರನ್ನು ಒಕ್ಕಲೆಬ್ಬಿಸುವುದು ಸರ್ವಥಾ ಸಲ್ಲದು. ವರದಿಯಿಂದ ಸ್ಥಳಿಯರ ಭೂ ಹಕ್ಕಿಗೆ ಧಕ್ಕೆ ಬರಬಾರದು. ಜನರು ನಿರಾತಂಕವಾಗಿ ಜೀವನ ಮಾಡುವಂತಾಗಬೇಕು ಎಂದರು.