ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡ್ಯಡ್ಕ-ಕೇಮಾರು ರಸ್ತೆ ನಾಲ್ಕು ತಿಂಗಳಿಂದ ಕೆಸರುಮಯವಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ. ಬೆಳಗ್ಗೆ ಶಾಲಾ-ಕಾಲೇಜುಗಳಿಗೆ ತೆರಳುವ ಬಸ್‌ಗಳು, ರಿಕ್ಷಾಗಳು, ದ್ವಿಚಕ್ರ ವಾಹನಗಳು ಹಾಗೂ ದಿನಗೂಲಿ ಕೆಲಸಕ್ಕೆ ತೆರಳುವ ನಾಗರಿಕರು ನಿತ್ಯ ಸಮಸ್ಯೆ ಎದುರಿಸುವಂತಾಗಿದೆ.