ಮಧ್ಯಾಹ್ನ 3 ಗಂಟೆಗೆ ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದರು ಶಾಲಾ ಮಕ್ಕಳ ಯಕ್ಷಗಾನ ಸಂಭ್ರಮ ಉದ್ಘಾಟಿಸಿ, ಆಶೀರ್ವಚನ ನೀಡಲಿದ್ದಾರೆ. ಪುತ್ತಿಗೆ ಮಠದ ಕಿರಿಯ ಯತಿ ಸುಶ್ರೀಂದ್ರ ತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಲಿದ್ದು, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ.ಬೀ. ವಿಜಯ ಬಲ್ಲಾಳ ಶುಭಾಶಂಸನೆ ನೀಡಲಿದ್ದಾರೆ. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಂ ಶೆಟ್ಟಿ, ಮಾಜಿ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಪಣಂಬೂರು ವಾಸುದೇವ ಐತಾಳ್ (ಯುಎಸ್ಎ), ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ್ ರಾವ್ ಪಾಲ್ಗೊಳ್ಳಲಿದ್ದಾರೆ.