ಭಾರತೀಯ ರೈಲ್ವೆಯೊಂದಿಗೆ ಕೊಂಕಣ ವಿಭಾಗ ವಿಲೀನ ಅಗತ್ಯ

ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ಸಭಾ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ ಮೊದಲಾದವರಿದ್ದರು.
ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ಸಭಾ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ ಮೊದಲಾದವರಿದ್ದರು.
Published on
ಬಂಟ್ವಾಳ: ಬಂಟ್ವಾಳದ ರೈಲ್ವೆ ನಿಲ್ದಾಣವೂ ಸೇರಿ ಅಮೃತ ಭಾರತ ನಿಲ್ದಾಣ ಯೋಜನೆಯಡಿ ಮರುಅಭಿವೃದ್ಧಿಗೊಂಡ ರಾಷ್ಟ್ರದ 75 ರೈಲ್ವೆ ನಿಲ್ದಾಣಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಂಜಾಬ್‌ನ ಜಲಂಧರ್ ಕ್ಯಾಂಟ್ ರೈಲ್ವೆ ನಿಲ್ದಾಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.
ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ಸಭಾ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ, ಅಭಿವೃದ್ಧಿಯ ದೃಷ್ಟಿಯಿಂದ ಕೊಂಕಣ ರೈಲ್ವೆ ವಿಭಾಗವನ್ನು ಭಾರತ ರೈಲ್ವೆಯೊಂದಿಗೆ ವಿಲೀನ ಮಾಡುವ ಅಗತ್ಯವನ್ನು ಒತ್ತಿ ಹೇಳಿ, ಇಲಾಖೆಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಕರಾವಳಿಯ ಎಲ್ಲ ಜನಪ್ರತಿನಿಧಿಗಳ ಸಹಕಾರ ಬೇಕು ಎಂದರು.
ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ, ಮಹಾಲಿಂಗ ನಾಯ್ಕ, ಡಿವಿಜನಲ್ ರೈಲ್ವೆ ಮ್ಯಾನೇಜರ್ ಮುದಿತ್ ಮಿತ್ತಲ್, ಗತಿಶಕ್ತಿಯ ಹಿರಿಯ ಅಭಿಯಂತ ಆನಂದ್ ಭಾರ್ತಿ ಉಪಸ್ಥಿತರಿದ್ದರು. ರೈಲ್ವೆ ಸಿಬ್ಬಂದಿ ನಿವೇದಿತಾ ಕಾರ್ಯಕ್ರಮ ನಿರ್ವಹಿಸಿದರು.
ಬಂಟ್ವಾಳ ರೈಲ್ವೆ ನಿಲ್ದಾಣದ ಫ್ಲಾೃಟ್‌ಫಾರ್ಮ್‌ನ ಬೃಹತ್ ಎಲ್‌ಇಡಿ ಪರದೆಯಲ್ಲಿ ನೇರಪ್ರಸಾರದ ಮೂಲಕ ಸಂಸದ ಕ್ಯಾ.ಬ್ರಿಜೇಶ್ ಚೌಟ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಕ್ಷೇತ್ರಾಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್, ರೈಲ್ವೆ ಹೋರಾಟಗಾರರು, ಸ್ಥಳೀಯ ಬಿಜೆಪಿ ಮುಖಂಡರು, ನಾಗರಿಕರು ಕಾರ್ಯಕ್ರಮವನ್ನು ವೀಕ್ಷಿಸಿದರು.
ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಒಳಪಡುವ ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ 26.18 ಕೋಟಿ ರೂ. ವೆಚ್ಚದ ಕಾಮಗಾರಿಗಳು ನಡೆದಿದ್ದು ಆಧುನಿಕ ಸೌಲಭ್ಯ ಒದಗಿಸಲಾಗಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು

ಪ್ರಧಾನಿ ಭಾಷಣ ಹಾಗೂ ಸಭಾ ಕಾರ್ಯಕ್ರಮ ಆರಂಭಕ್ಕೂ ಮುನ್ನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಬಂಟ್ವಾಳ ಸುತ್ತಮುತ್ತಲಿನ ಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಲವು ಪ್ರದರ್ಶನ ನೀಡಿದರು. ರೈಲ್ವೆ ಸಿಬ್ಬಂದಿಯಿಂದಲೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ರೈಲ್ವೆ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net