ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಎಸ್ಎಸ್ ಎಲ್ ಸಿ ಮತ್ತು ಪಿಯುಸಿ ಮುಗಿಸಿದ ಕೊರಗ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಐಟಿಐ, ಡಿಪ್ಲೊಮಾ ಮುಂತಾದ ವೃತ್ತಿಪರ ಕೋರ್ಸ್ಗಳಿಗೆ ಸೇರ್ಪೆಡೆಯಾಗಲು ಆಸಕ್ತರಾಗಿದ್ದರೆ ಶುಲ್ಕ ಪಾವತಿಸಲು ಬೇಕಾದ ವ್ಯವಸ್ಥೆಯನ್ನು ಮಾಡಿಕೊಡಲಾಗುವುದು. ಸರ್ಕಾರದ ಸವಲತ್ತು ಕೊರತೆಯಿಂದ ಈ ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣ ಮೊಟಕುಗೊಳಿಸಬಾರದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪಟ್ಟಿಯನ್ನು ತಯಾರಿಸಿ ನೀಡುವಂತೆ ಬಿಇಒ ಅವರಿಗೆ ಸೂಚಿಸಿದರು.