ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಕೆರೆ ಸ್ವಚ್ಛತೆ

ಕುಂದಾಪುರದ ಭಂಡಾರ್‌ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿದ್ಯಾರ್ಥಿಗಳಿಂದ ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಕೆರೆ ಸ್ವಚ್ಛತಾ ಶ್ರಮದಾನ ನಡೆಯಿತು.
ಕುಂದಾಪುರದ ಭಂಡಾರ್‌ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿದ್ಯಾರ್ಥಿಗಳಿಂದ ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಕೆರೆ ಸ್ವಚ್ಛತಾ ಶ್ರಮದಾನ ನಡೆಯಿತು.
Published on
ಕುಂದಾಪುರ: ಕುಂದಾಪುರದ ಭಂಡಾರ್‌ಕಾಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿದ್ಯಾರ್ಥಿಗಳಿಂದ ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಯನ್ನು ಶ್ರಮದಾನದ ಮೂಲಕ ಬುಧವಾರ ಸ್ವಚ್ಛಗೊಳಿಸಲಾಯಿತು.
ದೇವಸ್ಥಾನಕ್ಕೆ ಆಗಮಿಸಿದ್ದ ತೆಲುಗು ಚಿತ್ರ ನಟ ಶ್ರೀಕಾಂತ್ ಶ್ರಮದಾನಕ್ಕೆ ಚಾಲನೆ ನೀಡಿದರು. ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ, ಕೋಟೇಶ್ವರ ಗ್ರಾಪಂ ಅಧ್ಯಕ್ಷೆ ರಾಗಿಣಿ ದೇವಾಡಿಗ, ಭಂಡಾರ್‌ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರಾಚಾರಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಹಾಗೂ ಎನ್ನೆಸ್ಸೆಸ್ ಯೋಜನಾಧಿಕಾರಿಗಳಾದ ಅರುಣ್ ಎ.ಎಸ್. ಮತ್ತು ರಾಮಚಂದ್ರ ಆಚಾರ್ ಉಪಸ್ಥಿತರಿದ್ದರು. 75 ಮಂದಿ ಎನ್ನೆಸ್ಸೆಸ್ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net