ಕುಕ್ಕೆಗೆ ಟೀಮ್ ಇಂಡಿಯಾದ ಥ್ರೋ ಡೌನ್ ಸ್ಪೆಷಲಿಸ್ಟ್ ರಾಘವೇಂದ್ರ ಭೇಟಿ
ರಾಘವೇಂದ್ರ ಅವರನ್ನು ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಶಾಲು ಹೊದಿಸಿ ಗೌರವಿಸಿದರು. ಕೆ.ಎಂ.ಗೋಪಿನಾಥ್, ಪ್ರಮೋದ್ ಕುಮಾರ್ ಎಸ್. ಮತ್ತಿತರರು ಉಪಸ್ಥಿತರಿದ್ದರು.
ಸುಬ್ರಹ್ಮಣ್ಯ: ಟೀಮ್ ಇಂಡಿಯಾದ ಥ್ರೋ ಡೌನ್ ಸ್ಪೆಷಲಿಸ್ಟ್ ಕನ್ನಡಿಗ ಡಿ.ರಾಘವೇಂದ್ರ ದಿವೇದಿ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಭಾರತ ತಂಡ ವಿಶ್ವಕಪ್‌ನಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಲಭಿಸಿದ ಪದಕವನ್ನು ಜತೆಗೆ ತಂದು ವಿಶೇಷ ಪೂಜೆ ನೆರವೇರಿಸಿದರು.
ಕ್ಷೇತ್ರಕ್ಕೆ ಆಗಮಿಸಿದ ರಾಘವೇಂದ್ರ ದೇವರ ದರ್ಶನ ಪಡೆದು, ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಕುಕ್ಕೆ ಸುಬ್ರಹ್ಮಣ್ಯ ದೇವರ ಭಕ್ತರಾಗಿರುವ ಅವರು ಯಾವುದೇ ಕ್ರಿಕೆಟ್ ಪಂದ್ಯಾಟ ಆರಂಭಗೊಳ್ಳುವ ಮೊದಲು ಹಾಗೂ ಬಳಿಕ ಕುಕ್ಕೆಗೆ ಆಗಮಿಸಿ ದೇವರ ದರ್ಶನ ಪಡೆದು ಸೇವೆ ನೆರವೇರಿಸುತ್ತಾರೆ. ಬರಲು ಅಸಾಧ್ಯವಾದರೆ ಸ್ನೇಹಿತರ ಮೂಲಕ ಸೇವೆ ಸಲ್ಲಿಸುತ್ತಾರೆ.
ರಾಘವೇಂದ್ರ ಅವರಿಗೆ ಕ್ಷೇತ್ರದ ವತಿಯಿಂದ ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಗೌರವಿಸಿದರು. ದೇವಳದ ಕಚೇರಿ ಅಧೀಕ್ಷಕ ಕೆ.ಎಂ.ಗೋಪಿನಾಥ್, ಶಿಷ್ಟಾಚಾರ ವಿಭಾಗದ ಪ್ರಮೋದ್ ಕುಮಾರ್ ಎಸ್., ದೇವಳದ ಹರೀಶ್ ಮತ್ತಿತರರು ಉಪಸ್ಥಿತರಿದ್ದರು.