ಸಮುದಾಯ ಭವನ ನಿರ್ಮಾಣಕ್ಕೆ ಸಹಕಾರ

ಉಚ್ಚಿಲದಲ್ಲಿ ನಡೆದ ಕುಲಾಲ ಭಾಂದವರ ವಾಲಿಬಾಲ್ ಹಾಗೂ ತ್ರೋಬಾಲ್ ಪಂದ್ಯಾಕೂಟದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ಗುರ್ಮೆ ಸುರೇಶ್ ಶೆಟ್ಟಿ, ಹರೀಶ್ ಕುಲಾಲ್, ರವಿರಾಜ ರಾವ್, ಶಿವಕುಮಾರ್ ಮೆಂಡನ್, ಶಿಲ್ಪಾ ಜಿ ಸುವರ್ಣ, ಡಾ.ಕೃಷ್ಣಪ್ರಸಾದ್ ಕೂಡ್ಲು ಇದ್ದರು
ಉಚ್ಚಿಲದಲ್ಲಿ ನಡೆದ ಕುಲಾಲ ಭಾಂದವರ ವಾಲಿಬಾಲ್ ಹಾಗೂ ತ್ರೋಬಾಲ್ ಪಂದ್ಯಾಕೂಟದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ಗುರ್ಮೆ ಸುರೇಶ್ ಶೆಟ್ಟಿ, ಹರೀಶ್ ಕುಲಾಲ್, ರವಿರಾಜ ರಾವ್, ಶಿವಕುಮಾರ್ ಮೆಂಡನ್, ಶಿಲ್ಪಾ ಜಿ ಸುವರ್ಣ, ಡಾ.ಕೃಷ್ಣಪ್ರಸಾದ್ ಕೂಡ್ಲು ಇದ್ದರು
Published on
ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ಕಾಪು ವಲಯ ಕುಲಾಲ ಸಂಘಕ್ಕೆ ಸ್ವಂತ ನಿವೇಶನ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಸಹಕಾರ ನೀಡುವುದಾಗಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭರವಸೆ ನೀಡಿದರು.
ಕಾಪು ವಲಯ ಕುಲಾಲ ಸಂಘ ಆಶ್ರಯದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕುಲಾಲ ಸಮಾಜ ಬಾಂಧವರಿಗಾಗಿ ಉಚ್ಚಿಲ ಸರಸ್ವತಿ ಮಂದಿರ ಶಾಲಾ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ವಾಲಿಬಾಲ್ ಹಾಗೂ ತ್ರೋಬಾಲ್ ಪಂದ್ಯಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾಜದ ಸಾಧಕರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಹರೀಶ್ ಕುಲಾಲ್ ಬೆಳ್ಳಿಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ಎಲ್ಲೂರು ಗ್ರಾಪಂ ಅಧ್ಯಕ್ಷ ರವಿರಾಜ ರಾವ್, ಬಡಾ ಗ್ರಾಪಂ ಅಧ್ಯಕ್ಷ ಶಿವಕುಮಾರ್ ಮೆಂಡನ್, ಜಿಪಂ ಮಾಜಿ ಸದಸ್ಯೆ ಶಿಲ್ಪಾ ಜಿ.ಸುವರ್ಣ, ಉಡುಪಿ ಪ್ರಸಾದ್ ನೇತ್ರಾಲಯದ ಮುಖ್ಯಸ್ಥ ಡಾ.ಕೃಷ್ಣಪ್ರಸಾದ್ ಕೂಡ್ಲು ಉಪಸ್ಥಿತರಿದ್ದರು. ವಕೀಲ ಸುನೀಲ್ ಮೂಲ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಕುಲಾಲ್ ಬಿಳಿಯಾರು ವಂದಿಸಿದರು. ಶಿಕ್ಷಕ ದೇವಿ ಪ್ರಸಾದ್ ಬೆಳ್ಳಿಬೆಟ್ಟು ನಿರೂಪಿಸಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಉಡುಪಿ ಶಾಸಕ ಯಶ್‌ಪಾಲ ಸುವರ್ಣ, ಮಾಜಿ ಶಾಸಕರಾದ ಲಾಲಾಜಿ ಆರ್.ಮೆಂಡನ್, ಪ್ರಮೋದ್ ಮಧ್ವರಾಜ್ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net