ಕುಂದಾಪುರದ ಜನರ ಹೃದಯ ಶ್ರೀಮಂತಿಕೆ, ಆತಿಥ್ಯ ಅಪೂರ್ವ

 ‘ವಾಲ್ಬೆಲ್ಲ’ ಕಾರ್ಯಕ್ರಮದ ಸಮಾರೋಪದಲ್ಲಿ ವಿದ್ಯಾರಣ್ಯ ಪ್ರಶಸ್ತಿಯನ್ನು ಬೆಂಗಳೂರಿನ ಕುಂದಾಪುರ ಕನ್ನಡ ಪ್ರತಿಷ್ಠಾನದ ಪರವಾಗಿ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯ ಹೆಗ್ಡೆ ಅವರಿಗೆ ಪ್ರದಾನ ಮಾಡಲಾಯಿತು.
‘ವಾಲ್ಬೆಲ್ಲ’ ಕಾರ್ಯಕ್ರಮದ ಸಮಾರೋಪದಲ್ಲಿ ವಿದ್ಯಾರಣ್ಯ ಪ್ರಶಸ್ತಿಯನ್ನು ಬೆಂಗಳೂರಿನ ಕುಂದಾಪುರ ಕನ್ನಡ ಪ್ರತಿಷ್ಠಾನದ ಪರವಾಗಿ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯ ಹೆಗ್ಡೆ ಅವರಿಗೆ ಪ್ರದಾನ ಮಾಡಲಾಯಿತು.
Published on
ವಿಜಯವಾಣಿ ಸುದ್ದಿಜಾಲ ಕುಂದಾಪುರ
ಕುಂದಾಪುರದ ಜನರ ಹೃದಯ ಶ್ರೀಮಂತಿಕೆ, ಆತಿಥ್ಯ, ಸರಳತೆ, ಪ್ರೀತಿ, ವಿಶ್ವಾಸ ಹಾಗೂ ಎಲ್ಲರನ್ನೂ ಆತ್ಮೀಯವಾಗಿ ಸ್ವೀಕರಿಸುವ ಗುಣ ಅಪೂರ್ವವಾದದ್ದು. ಕಷ್ಟದಲ್ಲಿರುವವರಿಗೆ ಸಹಾಯಹಸ್ತ ಚಾಚುವ ವಿಶಾಲ ಮನೋಭಾವದಲ್ಲಿ ಕುಂದಾಪುರದ ಜನರು ಸದಾ ಮುಂಚೂಣಿಯಲ್ಲಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು.
ಮಂಗಳೂರು ವಿಶ್ವವಿದ್ಯಾಲಯದ ಕುಂದಾಪುರ ಕನ್ನಡ ಅಧ್ಯಯನ ಪೀಠ ಹಾಗೂ ಯಡಾಡಿ ಮತ್ಯಾಡಿ ಸುಜ್ಞಾನ ಪಿಯು ಕಾಲೇಜು ಆಶ್ರಯದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಮತ್ತು ಚಿತ್ರಕಲಾ ಸ್ಪರ್ಧೆಗಳ ‘ವಾಲ್ಬೆಲ್ಲ’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಮಾತನಾಡಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಕನ್ನಡ ಅಧ್ಯಯನ ಪೀಠ ಸದಸ್ಯ ಕೆ.ಜಯಪ್ರಕಾಶ್ ಹೆಗ್ಡೆ ಸಮಾರೋಪ ಭಾಷಣ ಮಾಡಿದರು. ಕುಂದಾಪುರ ಶಾಸಕ ಕಿರಣ್ ಕುವಾರ್ ಕೊಡ್ಗಿ ಶುಭ ಹಾರೈಸಿದರು.

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ನೀಡಲಾಗುತ್ತಿರುವ ವಿದ್ಯಾರಣ್ಯ ಪ್ರಶಸ್ತಿಯನ್ನು ಬೆಂಗಳೂರಿನ ಕುಂದಾಪುರ ಕನ್ನಡ ಪ್ರತಿಷ್ಠಾನ ಪರವಾಗಿ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯ ಹೆಗ್ಡೆ ಅವರಿಗೆ ಪ್ರದಾನ ಮಾಡಲಾಯಿತು. ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು. ಕುಂದಗನ್ನಡ ಅಧ್ಯಯನ ಪೀಠ ಸದಸ್ಯರಾದ ಉದಯ್ ಶೆಟ್ಟಿ ಪಡುಕೆರೆ ಮತ್ತು ಕೆ.ಸಿ.ರಾಜೇಶ್ ಅವರನ್ನು ಗೌರವಿಸಲಾಯಿತು.
ಕುಂದಗನ್ನಡ ಅಧ್ಯಯನ ಪೀಠದ ಸಂಯೋಜಕ ನಾಗಪ್ಪ ಗೌಡ, ಸದಸ್ಯರಾದ ಪಂಜು ಗಂಗೊಳ್ಳಿ, ರೇಖಾ ಬನ್ನಾಡಿ, ಸುಜ್ಞಾನ ಪಿಯು ಕಾಲೇಜು ಪ್ರಾಂಶುಪಾಲ ರಂಜನ್ ಬಿ.ಶೆಟ್ಟಿ, ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು ಪ್ರಾಂಶುಪಾಲ ಪ್ರಕಾಶ ಅಚಾರ್ಯ, ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ಪ್ರಾಂಶುಪಾಲೆ ಅನಿತಾ ಕುವಾರಿ ಉಪಸ್ಥಿತರಿದ್ದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕೋಶಾಧಿಕಾರಿ ಭರತ್ ಶೆಟ್ಟಿ ಸ್ವಾಗತಿಸಿದರು. ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಪ್ರಾಂಶುಪಾಲ ಪ್ರದೀಪ್ ಕೆ. ವಂದಿಸಿದರು.
ಯಡಾಡಿ ಮತ್ಯಾಡಿಯ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿ ಕುಂದಾಪುರ ಭಾಗದ ಕೃಷಿ ಪರಿಕರಗಳು, ಪ್ರಾಚೀನ ಉಪಯೋಗಿ ವಸ್ತುಗಳು, ಸಾಂಪ್ರದಾಯಿಕ ಪರಿಕರಗಳು ಹಾಗೂ ಸ್ಥಳೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಪ್ರದರ್ಶನಗಳು ನೆರೆದವರನ್ನು ಆಕರ್ಷಿಸಿದವು.

ಬಹುಮಾನ ವಿಜೇತರು

ಸಾಂಸ್ಕೃತಿಕ ಸ್ಪರ್ಧೆಗಳ ಸಮಗ್ರ ಪ್ರಶಸ್ತಿಯನ್ನು ಸುಜ್ಞಾನ ಪಿಯು ಕಾಲೇಜು ಪಡೆಯಿತು. ಕೊಲ್ಲೂರು ಮೂಕಾಂಬಿಕಾ ಪಿಯು ಕಾಲೇಜು ದ್ವಿತೀಯ, ಬಸ್ರೂರು ಶ್ರೀ ಶಾರದಾ ಪಿಯು ಕಾಲೇಜು ಮತ್ತು ಬಾರ್ಕೂರು ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು ಜಂಟಿಯಾಗಿ ತೃತೀಯ ಸ್ಥಾನ ಪಡೆದುಕೊಂಡಿತು. ಪ್ರೌಢಶಾಲಾ ವಿಭಾಗದ (9 ಮತ್ತು 10ನೇ ತರಗತಿ) ಚಿತ್ರಕಲಾ ಸ್ಪರ್ಧೆಯಲ್ಲಿ ಆರಾಧ್ಯ ಕಾಂಚನ್(ಕೆಪಿಎಸ್, ಬ್ರಹ್ಮಾವರ) ಪ್ರಥಮ, ರಿತ್ ಶೆಟ್ಟಿ(ಜಿಎಚ್‌ಎಸ್, ಸಿದ್ದಾಪುರ) ದ್ವಿತೀಯ ಹಾಗೂ ವೈಭವ ಆರ್.(ಕೆಎಸ್‌ಎಸ್ ಜಿಎಚ್‌ಎಸ್ ಹಕ್ಲಾಡಿ) ತೃತೀಯ ಸ್ಥಾನ ಪಡೆದರು. 8ನೇ ತರಗತಿ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜೀತ್ ಎಂ.ದೇವಾಡಿಗ (ಎಸ್.ವಿ.ಸ್ಕೂಲ್, ಗಂಗೊಳ್ಳಿ) ಪ್ರಥಮ, ಸಾನಿಧ್ಯಾ(ವಿದ್ಯಾರಣ್ಯ ಶಾಲೆ) ದ್ವಿತೀಯ ಹಾಗೂ ನಿಧಿ ಕುಮಾರಿ (ವಿದ್ಯಾರಣ್ಯ ಶಾಲೆ, ಕುಂದಾಪುರ) ತೃತೀಯ ಸ್ಥಾನ ಪಡೆದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net