ಜನರ ಹೃದಯದಲ್ಲಿ ನೆಲೆಸಿದ ನಾಯಕರು

 ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಣೆ ಕಾರ್ಯಕ್ರಮಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು. ಪ್ರಮುಖರಾದ ಬಾಲಕೃಷ್ಣ ಅಂಚನ್, ಚಂದ್ರಶೇಖರ್ ಭಂಡಾರಿ, ಲಾದ್ರು ಮಿನೆಜಸ್ ಮೊದಲಾದವರಿದ್ದರು.
ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಣೆ ಕಾರ್ಯಕ್ರಮಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು. ಪ್ರಮುಖರಾದ ಬಾಲಕೃಷ್ಣ ಅಂಚನ್, ಚಂದ್ರಶೇಖರ್ ಭಂಡಾರಿ, ಲಾದ್ರು ಮಿನೆಜಸ್ ಮೊದಲಾದವರಿದ್ದರು.
Published on

ಬಂಟ್ವಾಳ: ದೇಶದಲ್ಲಿ ಯುವಜನತೆಗೆ ಮತದಾನದ ಹಕ್ಕು ಒದಗಿಸಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಉಳುವ ರೈತನಿಗೆ ಭೂಮಿಯ ಒಡೆತನ ನೀಡಿದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ನೆನಪು ಜನರ ಹೃದಯದಲ್ಲಿ ಅಚ್ಚಳಿಯದೆ ಉಳಿದಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಬಂಟ್ವಾಳ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಗುರುವಾರ ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಸ್ವಾಗತಿಸಿದರು. ಎ.ಬಿ.ಅಬ್ದುಲ್ಲಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net