ಅಪರಿಚಿತ ವ್ಯಕ್ತಿಗಳೊಂದಿಗೆ ವೈಯಕ್ತಿಕ ಮಾಹಿತಿ, ಬ್ಯಾಂಕ್ ಖಾತೆಯ ವಿವರ, ಪಾಸ್ವರ್ಡ್ ಹಾಗೂ ಒಟಿಪಿ ಮಾಹಿತಿ ಯಾವುದೇ ಕಾರಣಕ್ಕೂ ಹಂಚಿಕೊಳ್ಳಬಾರದು. ಸೈಬರ್ ವಂಚನೆ, ಆನ್ಲೈನ್ ಕಿರುಕುಳ, ನಕಲಿ ಲಿಂಕ್ ಹಾಗೂ ಡಿಜಿಟಲ್ ಮೋಸಗಳಿಂದ ಎಚ್ಚರಿಕೆಯಿಂದ ಇರಬೇಕು. ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯ, ಮಾನಸಿಕ ಸ್ಥಿತಿ, ಶಿಕ್ಷಣ, ಕುಟುಂಬ ಹಾಗೂ ಸಮಾಜದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಹೀಗಾಗಿ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಉತ್ತಮ ಸ್ನೇಹಬಳಗ ಹೊಂದಿರಬೇಕು. ಶಿಸ್ತುಬದ್ಧ ಹಾಗೂ ಮೌಲ್ಯಯುತ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.