ಸಾಹಿತ್ಯ ಸಮ್ಮೇಳನ ಕನ್ನಡಿಗರ ಹಬ್ಬವಾಗಲಿ

 ಹೆಬ್ರಿ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಮಂತ್ರಣ ಪತ್ರಿಕೆಯನ್ನು ಕೆ.ಮೋಹನದಾಸ್ ಹೆಗ್ಡೆ ಕುದ್ರುಬೀಡು ಮಂಗಳವಾರ ಬಿಡುಗಡೆ ಮಾಡಿದರು. ನೀಲಾವರ ಸುರೇಂದ್ರ ಅಡಿಗ, ಶ್ರೀನಿವಾಸ ಭಂಡಾರಿ ಮುದ್ದೂರು, ಸುಬ್ರಹ್ಮಣ್ಯ ಶೆಟ್ಟಿ, ಯೋಗೀಶ್ ಭಟ್ ಹೆಬ್ರಿ, ಕೆ.ಸುಧಾಕರ ಶೆಟ್ಟಿ ಅರಸಮ್ಮಕಾನು ಉಪಸ್ಥಿತರಿದ್ದರು.
ಹೆಬ್ರಿ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಮಂತ್ರಣ ಪತ್ರಿಕೆಯನ್ನು ಕೆ.ಮೋಹನದಾಸ್ ಹೆಗ್ಡೆ ಕುದ್ರುಬೀಡು ಮಂಗಳವಾರ ಬಿಡುಗಡೆ ಮಾಡಿದರು. ನೀಲಾವರ ಸುರೇಂದ್ರ ಅಡಿಗ, ಶ್ರೀನಿವಾಸ ಭಂಡಾರಿ ಮುದ್ದೂರು, ಸುಬ್ರಹ್ಮಣ್ಯ ಶೆಟ್ಟಿ, ಯೋಗೀಶ್ ಭಟ್ ಹೆಬ್ರಿ, ಕೆ.ಸುಧಾಕರ ಶೆಟ್ಟಿ ಅರಸಮ್ಮಕಾನು ಉಪಸ್ಥಿತರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಆರ್ಡಿ
ಕನ್ನಡದ ಮನಸ್ಸುಗಳು ಒಂದಾಗಿ ಸಾಹಿತ್ಯದ ಕಂಪನ್ನು ಪಸರಿಸುವ ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡಿಗರ ಹಬ್ಬವಾಗಲಿ. ಇಂತಹ ಶ್ರೇಷ್ಠ ಕಾರ್ಯಕ್ರಮವನ್ನು ಅರಸಮ್ಮಕಾನು ಶ್ರೀನಾಗಕನ್ನಿಕಾ ಅಮ್ಮನವರ ಕ್ಷೇತ್ರದಲ್ಲಿ ಹಮ್ಮಿಕೊಂಡಿರುವುದು ಪ್ರಶಂಸನೀಯ. ಸಮ್ಮೇಳನ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ ಎಂದು ಅರಸಮ್ಮಕಾನು ಶ್ರೀನಾಗಕನ್ನಿಕಾ ದುರ್ಗಾಪರಮೇಶ್ವರಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಮೋಹನದಾಸ್ ಹೆಗ್ಡೆ ಕುದ್ರುಬೀಡು ಹೇಳಿದರು.
ದೇವಳದ ಗಂಗಡಬೈಲು ಸುಬ್ರಾಯ ಬಾಯರಿ ವೇದಿಕೆಯಲ್ಲಿ ಕಸಾಪ ಹೆಬ್ರಿ ತಾಲೂಕು ಘಟಕದ ವತಿಯಿಂದ ಮಾ.1ರಂದು ನಡೆಯಲಿರುವ ಹೆಬ್ರಿ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಮಂಗಳವಾರ ಬಿಡುಗಡೆಗೊಳಿಸಿ ಮಾತನಾಡಿದರು.

ಹೆಬ್ರಿ ತಾಲೂಕು ಕಸಾಪ ಅಧ್ಯಕ್ಷ ಶ್ರೀನಿವಾಸ ಭಂಡಾರಿ ಮುದ್ದೂರು ಅಧ್ಯಕ್ಷತೆ ವಹಿಸಿದ್ದರು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಉದ್ಯಮಿ ಯೋಗೀಶ್ ಭಟ್, ಹೆಬ್ರಿ ತಾಲೂಕು ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಕೆ.ಸುಧಾಕರ ಶೆಟ್ಟಿ ಅರಸಮ್ಮಕಾನು, ಕಾರ್ಯಾಧ್ಯಕ್ಷ ಶಂಕರ ಪೂಜಾರಿ, ಸಂಚಾಲಕ ರಾಧಾಕೃಷ್ಣ ಕ್ರಮಧಾರಿ, ಗೌರವಾಧ್ಯಕ್ಷ ನಾಗರಾಜ ಬಾಯರಿ ಗಂಗಡಬೈಲು, ಪ್ರಧಾನ ಕಾರ್ಯದರ್ಶಿ ನವೀನ ಶೆಟ್ಟಿ ಮಡಾಮಕ್ಕಿ ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ನವೀನ ಶೆಟ್ಟಿ ಮಡಾಮಕ್ಕಿ ಸ್ವಾಗತಿಸಿದರು. ಪುಷ್ಪಾವತಿ ಪ್ರಾರ್ಥಿಸಿದರು. ಮುಖ್ಯಶಿಕ್ಷಕ ಶಶಿಧರ ಶೆಟ್ಟಿ ನಿರೂಪಿಸಿದರು. ಕಸಾಪ ಹೆಬ್ರಿ ತಾಲೂಕು ಗೌರವ ಕಾರ್ಯದರ್ಶಿ ಮಂಜುನಾಥ ಕೆ.ಶಿವಪುರ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net