ಮೂಡುಬಿದಿರೆ: ದುಶ್ಚಟಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಶಿಬಿರಾಧಿಕಾರಿ ದೇವಿಪ್ರಸಾದ್ ಹೇಳಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಡುಬಿದಿರೆ ತಾಲೂಕು ಜನಜಾಗೃತಿ ವೇದಿಕೆ ವತಿಯಿಂದ ಆಲಂಗಾರು ವಲಯದ ಸೇಂಟ್ ಥೋಮಸ್ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸ್ವಾಸ್ತ್ಯ ಸಂಕಲ್ಪ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ದುಶ್ಚಟಗಳ ದುಷ್ಪರಿಣಾಮ ಹಾಗೂ ಅವುಗಳಿಂದ ದೂರವಿರುವ ಅಗತ್ಯದ ಕುರಿತು ಮಾಹಿತಿ ನೀಡಿದರು.
ಮುಖ್ಯ ಶಿಕ್ಷಕಿ ಸಿಲ್ವೀಯಾ ಡೇಸಾ ಅಧ್ಯಕ್ಷತೆ ವಹಿಸಿದ್ದರು. ಮೂಡುಬಿದಿರೆ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ವಾಸುದೇವ ನಾಯಕ್, ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ದಯಾನಂದ ಪೈ, ಒಕ್ಕೂಟ ಅಧ್ಯಕ್ಷ ಸುರೇಂದ್ರ ಪೂಜಾರಿ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕ ಚಂದ್ರಹಾಸ ಸ್ವಾಗತಿಸಿದರು. ಸೇವಾಪ್ರತಿನಿಧಿ ಉಷಾ ಕಿರಣ್ ವಂದಿಸಿದರು.