ಯುವಜನತೆ ಅರಿಯಲಿ ಸಂವಿಧಾನದ ಜವಾಬ್ದಾರಿ

ಸುಜ್ಞಾನ ವಿದ್ಯಾಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ಡಾ.ರಮೇಶ್ ಶೆಟ್ಟಿ, ಪ್ರದೀಪ್ ಕುಮಾರ್ ಮೊದಲಾದವರಿದ್ದರು.
ಸುಜ್ಞಾನ ವಿದ್ಯಾಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ಡಾ.ರಮೇಶ್ ಶೆಟ್ಟಿ, ಪ್ರದೀಪ್ ಕುಮಾರ್ ಮೊದಲಾದವರಿದ್ದರು.
Published on
ಕುಂದಾಪುರ: ವಿಶ್ವಕ್ಕೆ ಸದ್ವಿಚಾರ, ಸಂಸ್ಕೃತಿ, ಸಂಸ್ಕಾರವನ್ನು ನೀಡಿದ ದೇಶ ನಮ್ಮದು. ಯುವಜನತೆ ಸಂವಿಧಾನದಲ್ಲಿ ಅಳವಡಿಸಿರುವ ಜವಾಬ್ದಾರಿಗಳನ್ನು ಅರಿತುಕೊಂಡು ಸದೃಢ ದೇಶಕಟ್ಟುವಲ್ಲಿ ಶ್ರಮಿಸಬೇಕು ಎಂದು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಕರೆ ನೀಡಿದರು.
ಗಣರಾಜ್ಯೋತ್ಸವ ಪ್ರಯುಕ್ತ ಸುಣ್ಣಾರಿಯ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಸುಜ್ಞಾನ ವಿದ್ಯಾಸಂಸ್ಥೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತದ ಹಿರಿಮೆ ಅರಿತು ನಾವೆಲ್ಲರೂ ಜಾತಿ, ಮತ, ಪ್ರಾಂತ್ಯದಂತಹ ಸಂಕುಚಿತ ಭಾವನೆ ಮೀರಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದರು.
ಪ್ರಾಂಶುಪಾಲ ರಂಜನ್ ಬಿ.ಶೆಟ್ಟಿ, ಮುಖ್ಯಶಿಕ್ಷಕ ಪ್ರದೀಪ್ ಕುಮಾರ್, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಸ್ಥ ವಿನಯ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net