ವಿದ್ಯಾರ್ಥಿಗಳಲ್ಲಿ ಇರಲಿ ಆವಿಷ್ಕಾರದ ಗುಣ

ಯುಬಿಎಸ್ ಸಮೂಹ ಶಿಕ್ಷಣ ಸಂಸ್ಥೆ ಮತ್ತು ಉಪ್ಪುಂದ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಜಂಟಿಯಾಗಿ ಆಯೋಜಿಸಿದ್ದ ವಿಜ್ಞಾನ ವಸ್ತುಪ್ರದರ್ಶನಕ್ಕೆ ಯಶಶ್ರೀ ಬಿ.ಶೆಟ್ಟಿ ಚಾಲನೆ ನೀಡಿದರು. ಮುಖ್ಯಶಿಕ್ಷಕರಾದ ಅಮಿತಾ ಶೆಟ್ಟಿ, ರಾಮದಾಸ ಇತರರು ಇದ್ದರು.
ಯುಬಿಎಸ್ ಸಮೂಹ ಶಿಕ್ಷಣ ಸಂಸ್ಥೆ ಮತ್ತು ಉಪ್ಪುಂದ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಜಂಟಿಯಾಗಿ ಆಯೋಜಿಸಿದ್ದ ವಿಜ್ಞಾನ ವಸ್ತುಪ್ರದರ್ಶನಕ್ಕೆ ಯಶಶ್ರೀ ಬಿ.ಶೆಟ್ಟಿ ಚಾಲನೆ ನೀಡಿದರು. ಮುಖ್ಯಶಿಕ್ಷಕರಾದ ಅಮಿತಾ ಶೆಟ್ಟಿ, ರಾಮದಾಸ ಇತರರು ಇದ್ದರು.
Published on
ಬೈಂದೂರು: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಜ್ಞಾನ ಹೆಚ್ಚಿಸಲು ಹಾಗೂ ಸೃಜನಶೀಲತೆ ಮತ್ತು ಪ್ರಾಯೋಗಿಕ ಆಸಕ್ತಿಗೆ ಅನುಗುಣವಾಗಿ ವಿಜ್ಞಾನ ವಸ್ತುಪ್ರದರ್ಶನ ಆಯೋಜಿಸಿರುವುದು ಶ್ಲಾಘನೀಯ. ಶಾಲೆಗಳಲ್ಲಿ ಮಕ್ಕಳಿಗೆ ಪಾಠದ ಜತೆಗೆ ಇಂತಹ ಕಾರ್ಯಕ್ರಮಗಳ ಮೂಲಕ ಮಾರ್ಗದರ್ಶನ ನೀಡುವುದರಿಂದ ವಿದ್ಯಾರ್ಥಿಗಳ ಮುಂದಿನ ಜೀವನದ ದಾರಿ, ಕನಸುಗಳನ್ನು ನನಸು ಮಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದು ಯುಬಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಯಶಶ್ರೀ ಬಿ.ಶೆಟ್ಟಿ ಹೇಳಿದರು.
ಬೈಂದೂರು ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆ ಹಾಗೂ ಉಪ್ಪುಂದ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಜಂಟಿಯಾಗಿ ಬುಧವಾರ ಅಯೋಜಿಸಿದ್ದ ವಿಜ್ಞಾನ ಹಾಗೂ ಪ್ರಾಚ್ಯವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಕುತೂಹಲ ಮತ್ತು ಆವಿಷ್ಕಾರದ ಗುಣವಿದ್ದಾಗ ಹೊಸ ಹೊಸ ಯೋಜನೆಗಳನ್ನು ಅಳವಡಿಸಿಕೊಂಡು ಪ್ರಾಯೋಗಿಕ ಅನುಭವವನ್ನು ಪಡೆದುಕೊಳ್ಳಲು ಸಾಧ್ಯವಿದೆ. ಶಾಲೆಯಲ್ಲಿನ ಕ್ರಿಯಾಶೀಲ ಶಿಕ್ಷಕರಿಂದ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅರಳುತ್ತದೆ. ಇಂತಹ ಪರಿಸರದಲ್ಲಿ ಕಲಿಯುವ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆಯುತ್ತಾರೆ ಎಂದರು.
ಎರಡೂ ಶಾಲೆಗಳ ಮುಖ್ಯಶಿಕ್ಷಕರಾದ ಅಮಿತಾ ಶೆಟ್ಟಿ, ರಾಮದಾಸ ಇದ್ದರು. 150ಕ್ಕೂ ಹೆಚ್ಚು ವಿದ್ಯಾರ್ಥಿಗಳು 200ಕ್ಕೂ ಹೆಚ್ಚು ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದರು. ಸ್ಥಳೀಯ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ, ರತ್ತೂಬಾಯಿ ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಪಾಲಕರು ವಿವಿಧ ಮಾದರಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ನಿರ್ಲಕ್ಷ ಮಾಡಿದರೆ ದೇಶ ಅಭಿವೃದ್ಧಿಯತ್ತ ಸಾಗಲು ಸಾಧ್ಯವಿಲ್ಲ. ಮಕ್ಕಳು ತಮ್ಮ ಸರ್ವಾಂಗೀಣ ವಿಕಾಸಕ್ಕೆ ಪೂರಕವಾದ ಪರಿಪೂರ್ಣ ಅನುಭವ ಪಡೆದು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶಾಲಾ ಆಡಳಿತ ಮಂಡಳಿಯವರು ಇಂತಹ ಜ್ಞಾನವರ್ಧಕ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸಿರುವುದು ಹೆಮ್ಮೆಯ ವಿಷಯವಾಗಿದೆ.

ಚಿತ್ರ: ಬಿವೈಎನ್-ಫೆ.04-1-
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net