ಭಾಷಾ ಪ್ರೇಮ ಇರಲಿ, ಭಾಷಾಂಧತೆ ಬೇಡ

 ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವಿಚಾರಗೋಷ್ಠಿಯನ್ನು ಡಾ.ಪುರುಷೋತ್ತಮ ಬಿಳಿಮಲೆ ಉದ್ಘಾಟಿಸಿದರು. ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಟಿ.ವಿಶ್ವನಾಥ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್ಲ ಮೊದಲಾದವರಿದ್ದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವಿಚಾರಗೋಷ್ಠಿಯನ್ನು ಡಾ.ಪುರುಷೋತ್ತಮ ಬಿಳಿಮಲೆ ಉದ್ಘಾಟಿಸಿದರು. ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಟಿ.ವಿಶ್ವನಾಥ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್ಲ ಮೊದಲಾದವರಿದ್ದರು.
Published on
ಸುಳ್ಯ: ಕನ್ನಡದ ಬಗ್ಗೆ ಪ್ರೀತಿ ಇರುವುದರ ಜತೆಗೆ ಇತರ ಭಾಷೆಗಳನ್ನು ಗೌರವಿಸಬೇಕು. ನಾವು ಭಾಷಾ ಪ್ರೇಮ ಬೆಳೆಸಿಕೊಳ್ಳಬೇಕೇ ಹೊರತು ಭಾಷಾಂಧತೆ ಇರಬಾರದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸುಳ್ಯ ನೆಹರು ಮೆಮೋರಿಯಲ್ ಕಾಲೇಜು ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ, ಕಾಲೇಜಿನ ಸುವರ್ಣ ಮಹೋತ್ಸವದ ಅಂಗವಾಗಿ ಆಯೋಜಿಸಲಾದ ಒಂದು ದಿನದ ವಿಚಾರ ಗೋಷ್ಠಿ ಉದ್ಘಾಟಿಸಿ ಮಾತನಾಡಿದರು.
ಪಠ್ಯಪುಸ್ತಕದ ಭಾಷೆಗೂ ಹಾಗೂ ಜನರು ಆಡುವ ಭಾಷೆಯ ನಡುವೆ ಸಾಕಷ್ಟು ವ್ಯತ್ಯಾಸ ಇರುವುದರಿಂದ ಕನ್ನಡ ಕಲಿಯುವುದೇ ಕಷ್ಟ ಎಂಬ ಭಾವನೆ ಬಂದಿದೆ. ಕನ್ನಡಿಗರೇ ಇಂಗ್ಲಿಷ್ ಪರವಾಗಿರುವ ಸ್ಥಿತಿ ಉಂಟಾಗಿದೆ. ಕರ್ನಾಟಕದಲ್ಲಿ 290 ಭಾಷೆಗಳಿವೆ. ಸ್ವಾತಂತ್ರಾೃ ನಂತರ ದೇಶದಲ್ಲಿ 254 ಭಾಷೆಗಳು ನಾಶವಾಗಿವೆ. ಮುಂದಿನ 30 ವರ್ಷದಲ್ಲಿ 390 ಭಾಷೆಗಳು ನಾಶವಾಗುವ ಅಪಾಯವಿದೆ ಎಂದು ಅಧ್ಯಯನಗಳು ಹೇಳುತ್ತವೆ ಎಂದು ಡಾ.ಬಿಳಿಮಲೆ ಉಲ್ಲೇಖಿಸಿದರು.
ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಟಿ.ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್ಲ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ನೆಹರು ಮೆಮೋರಿಯಲ್ ಕಾಲೇಜು ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಮುಖ್ಯ ಅತಿಥಿಯಾಗಿದ್ದರು.
ಪ್ರಾಂಶುಪಾಲ ರುದ್ರಕುಮಾರ್ ಎಂ.ಎಂ. ಸ್ವಾಗತಿಸಿದರು. ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮಧುರಾ ಎಂ.ಆರ್. ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಅನುರಾಧಾ ಕುರುಂಜಿ ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net