ಸವಾಲು ಎದುರಿಸುವ ಜೀವನ ಶಿಕ್ಷಣ ಅಗತ್ಯ

 ಉಪ್ಪುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ  ನಡೆಸಿದ ಗ್ರಾಮೀಣ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಮಕ್ಕಳ ಗ್ರಾಮಸಭೆಯಲ್ಲಿ ಬಹುಮಾನ ವಿತರಿಸಲಾಯಿತು. ಗ್ರಾಪಂ ಅಧ್ಯಕ್ಷ ಮೋಹನಚಂದ್ರ, ಉಪಾಧ್ಯಕ್ಷೆ ಮಹಾಲಕ್ಷ್ಮೀ ಗಾಣಿಗ ಇತರರು ಇದ್ದರು.
ಉಪ್ಪುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಗ್ರಾಮೀಣ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಮಕ್ಕಳ ಗ್ರಾಮಸಭೆಯಲ್ಲಿ ಬಹುಮಾನ ವಿತರಿಸಲಾಯಿತು. ಗ್ರಾಪಂ ಅಧ್ಯಕ್ಷ ಮೋಹನಚಂದ್ರ, ಉಪಾಧ್ಯಕ್ಷೆ ಮಹಾಲಕ್ಷ್ಮೀ ಗಾಣಿಗ ಇತರರು ಇದ್ದರು.
Published on
ಬೈಂದೂರು: ಮಕ್ಕಳು ಅರಳುವ ಹೂವುಗಳು. ಶಿಕ್ಷಣವೇ ನಿಜವಾದ ಧರ್ಮವಾಗಿದೆ. ಜೀವನ ದೇವರ ವರದಾನವಾಗಿದ್ದು, ನಿಸ್ವಾರ್ಥ ಸೇವೆಯ ಮೂಲಕ ಅದನ್ನು ಸಾರ್ಥಕಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇಂದಿನ ಕಾಲಘಟ್ಟದಲ್ಲಿ ಬದುಕಿನ ಪರೀಕ್ಷೆ, ಸವಾಲು ಎದುರಿಸಲು ಕಲಿಸುವ ಶಿಕ್ಷಣದ ಅಗತ್ಯವಿದೆ ಎಂದು ಉಪ್ಪುಂದ ಗ್ರಾಪಂ ಅಧ್ಯಕ್ಷ ಮೋಹನಚಂದ್ರ ಹೇಳಿದರು. 
 ಉಪ್ಪುಂದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಮಕ್ಕಳ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 
 ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಮೂಲಕ ಮಕ್ಕಳಿಗೆ ನೀಡಲಾಗುತ್ತಿರುವ ಸೌಲಭ್ಯಗಳನ್ನು ವಿವರಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲಾ ಮಕ್ಕಳಿಗೆ ನಡೆಸಿದ ಗ್ರಾಮೀಣ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ನಾಗರಾಜ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. 
 ಪಿಡಿಒ ಮಂಜುನಾಥ ಕೌಟಿಕರ್ ಹಿಂದಿನ ಗ್ರಾಮಸಭೆಯ ಅನುಪಾಲನಾ ವರದಿ ಮಂಡಿಸಿದರು.
 ಗ್ರಾಪಂ ಉಪಾಧ್ಯಕ್ಷೆ ಮಹಾಲಕ್ಷ್ಮೀ ಗಾಣಿಗ, ಸದಸ್ಯರಾದ ಮಂಜುನಾಥ ದೇವಾಡಿಗ, ಲಕ್ಷ್ಮೀ, ಪ್ರೇಮಾ, ಪೂರ್ಣಿಮಾ, ಸುಮಿತ್ರಾ ಗಾಣಿಗ, ನಮ್ಮ ಭೂಮಿ ಸಂಸ್ಥೆಯ ಆಶಾ, ಮುಖ್ಯಶಿಕ್ಷಕ ಮಂಜುನಾಥ ದೇವಾಡಿಗ ಇದ್ದರು. 
 ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ಕೆ.ನಾಯ್ಕ ಮಾರ್ಗದರ್ಶಿ ಅಧಿಕಾರಿಯಾಗಿದ್ದರು. ವಿದ್ಯಾರ್ಥಿನಿ ಖುಷಿ ಸ್ವಾಗತಿಸಿದರು. ಪ್ರಾರ್ಥನಾ, ಜಯಾ ಮತ್ತು ಸಾನಿಧ್ಯ ನಿರೂಪಿಸಿದರು. ಸ್ಪಂದನಾ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net