ಪಠ್ಯೇತರ ಚಟುವಟಿಕೆಗಳಿಂದ ಜೀವನ ಮೌಲ್ಯ ಅರಿವು

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ನೆಸ್ಸೆಸ್ ಹಾಗೂ ಯುವ ರೆಡ್‌ಕ್ರಾಸ್ ಘಟಕಗಳ ಶೈಕ್ಷಣಿಕ ವರ್ಷದ ವಾರ್ಷಿಕ ಚಟುವಟಿಕೆಗಳಿಗೆ ಉಪನ್ಯಾಸಕ ದಿವಾಕರ ಶೆಟ್ಟಿ ಚಾಲನೆ ನೀಡಿದರು. ಪ್ರಾಂಶುಪಾಲ ಸಂತೋಷ್, ಯುವ ರೆಡ್‌ಕ್ರಾಸ್ ಘಟಕ ಯೋಜನಾಧಿಕಾರಿ ಅವನೀಶ್ ಪಿ., ಎನ್ನೆಸ್ಸೆಸ್ ಯೋಜನಾಧಿಕಾರಿ ಸಾಯಿಚರಣ್ ಸಿ.ಎಚ್. ಉಪಸ್ಥಿತರಿದ್ದರು.
ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ನೆಸ್ಸೆಸ್ ಹಾಗೂ ಯುವ ರೆಡ್‌ಕ್ರಾಸ್ ಘಟಕಗಳ ಶೈಕ್ಷಣಿಕ ವರ್ಷದ ವಾರ್ಷಿಕ ಚಟುವಟಿಕೆಗಳಿಗೆ ಉಪನ್ಯಾಸಕ ದಿವಾಕರ ಶೆಟ್ಟಿ ಚಾಲನೆ ನೀಡಿದರು. ಪ್ರಾಂಶುಪಾಲ ಸಂತೋಷ್, ಯುವ ರೆಡ್‌ಕ್ರಾಸ್ ಘಟಕ ಯೋಜನಾಧಿಕಾರಿ ಅವನೀಶ್ ಪಿ., ಎನ್ನೆಸ್ಸೆಸ್ ಯೋಜನಾಧಿಕಾರಿ ಸಾಯಿಚರಣ್ ಸಿ.ಎಚ್. ಉಪಸ್ಥಿತರಿದ್ದರು.
Published on
ಬೆಳ್ತಂಗಡಿ: ಯುವಜನರಲ್ಲಿ ವ್ಯಕ್ತಿತ್ವ ವಿಕಸನ, ದೇಶಪ್ರೇಮ, ನಾಯಕತ್ವ ಹಾಗೂ ಸೇವಾ ಮನೋಭಾವ ಬೆಳೆಸುವಲ್ಲಿ ಎನ್ನೆಸ್ಸೆಸ್ ಮತ್ತು ಯುವ ರೆಡ್‌ಕ್ರಾಸ್‌ನಂಥ ಸ್ವಯಂಸೇವಾ ಸಂಘಟನೆಗಳ ಪಾತ್ರ ಮಹತ್ತರವಾಗಿದೆ. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವುದರಿಂದ ಜೀವನ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯ ಅರಿವು ಬೆಳೆಯುತ್ತದೆ ಎಂದು ಸುಂಕದಟ್ಟೆಯ ಶ್ರೀ ನಿರಂಜನ ಸ್ವಾಮಿ ಪಾಲಿಟೆಕ್ನಿಕ್‌ನ ಉಪನ್ಯಾಸಕ ದಿವಾಕರ ಶೆಟ್ಟಿ ಹೇಳಿದರು.
ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ನೆಸ್ಸೆಸ್ ಹಾಗೂ ಯುವ ರೆಡ್‌ಕ್ರಾಸ್ ಘಟಕಗಳ ಶೈಕ್ಷಣಿಕ ವರ್ಷದ ವಾರ್ಷಿಕ ಚಟುವಟಿಕೆಗಳಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು.
ಪ್ರಾಂಶುಪಾಲ ಸಂತೋಷ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ಶೈಕ್ಷಣಿಕ ವರ್ಷದಲ್ಲಿ ಎನ್ನೆಸ್ಸೆಸ್ ಹಾಗೂ ಯುವ ರೆಡ್‌ಕ್ರಾಸ್ ಘಟಕ ರಕ್ತದಾನ ಶಿಬಿರ, ರಾಷ್ಟ್ರೀಯ ಯುವ ದಿನಾಚರಣೆ, ವಾರ್ಷಿಕ ವಿಶೇಷ ಶಿಬಿರ, ಆರೋಗ್ಯ ಜಾಗೃತಿ ಸೇರಿದಂತೆ ಅನೇಕ ಸಮಾಜಮುಖಿ ಚಟುವಟಿಕೆಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡಿದೆ ಎಂದರು.
ಯುವ ರೆಡ್‌ಕ್ರಾಸ್ ಘಟಕ ಯೋಜನಾಧಿಕಾರಿ ಅವನೀಶ್ ಪಿ., ಎನ್ನೆಸ್ಸೆಸ್ ಯೋಜನಾಧಿಕಾರಿ ಸಾಯಿಚರಣ್ ಸಿ.ಎಚ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್ನೆಸ್ಸೆಸ್ ಉಪ ಯೋಜನಾಧಿಕಾರಿ ತ್ರಿಭುವನ್ ಜೈನ್ ಪ್ರತಿಜ್ಞಾ ವಿಧಿ ಬೋಧಿಸಿದರು. ಬೋಧಕ-ಬೋಧಕೇತರ ಸಿಬ್ಬಂದಿ, ಎನ್ನೆಸ್ಸೆಸ್ ಮತ್ತು ಯುವ ರೆಡ್‌ಕ್ರಾಸ್ ಘಟಕದ ಸ್ವಯಂಸೇವಕರು ಉಪಸ್ಥಿತರಿದ್ದರು.
ಸ್ವಯಂಸೇವಕಿಯರಾದ ವರ್ಷಾ ಕೆ.ಪಿ. ಸ್ವಾಗತಿಸಿದರು. ಮಂಜೂಷಾ ಹೆಗ್ಡೆ ನಿರೂಪಿಸಿದರು. ಮಾನ್ಯಾ ಡಿ.ಪಿ. ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net