ನೂತನ ಗವರ್ನರ್ ರಾಜೀವ್ ಕೋಟ್ಯಾನ್ ಮಾತನಾಡಿ, 2026&27ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯಾದ್ಯಂತ ವಿವಿಧ ಜನೋಪಯೋಗಿ ಸೇವಾ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳುವ ಗುರಿಯನ್ನು ಲಯನ್ಸ್ ಕ್ಲಬ್ಗಳು ಹೊಂದಿದೆ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 75 ಲಯನ್ಸ್ ಕ್ಲಬ್ಗಳಲ್ಲಿ 2,500ಕ್ಕೂ ಹೆಚ್ಚು ಸದಸ್ಯರು ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರತಿಯೊಂದು ಕ್ಲಬ್ನಿಂದ ಪರಿಸರ ಸಂರಕ್ಷಣೆ, ಆರೋಗ್ಯ, ಶಿಕ್ಷಣ, ಕುಡಿಯುವ ನೀರಿನ ಯೋಜನೆ, ಆರ್ಥಿಕವಾಗಿ ಹಿಂದುಳಿದವರ ಹಸಿವು ನಿವಾರಣೆ, ಮಧುಮೇಹ ತಡೆಗಟ್ಟುವಿಕೆ, ಯುವಜನರಿಗೆ ಉದ್ಯೋಗ ಮಾಹಿತಿ, ಕ್ಯಾನ್ಸರ್ ಪೀಡಿತ ಮಕ್ಕಳಿಗೆ ನೆರವು ಹಾಗೂ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.