ಕಂಡ ಕಂಡಲ್ಲಿ ತ್ಯಾಜ್ಯ ಎಸೆಯುವವರಿಗೆ ದಂಡ ಹಾಗೂ ಸಿಸಿ ಕ್ಯಾಮರಾ ಅಳವಡಿಸುವಂತೆ ಅಚ್ಚುತ್ ಪೂಜಾರಿ ಸಲಹೆ ನೀಡಿದರು. ಸಾಲಿಗ್ರಾಮ ಪಟ್ಟಣ ಪಂಚಾಯಿತಿಯನ್ನು ಸ್ವಚ್ಛ ಪಟ್ಟಣವಾಗಿಸಲು ಆ್ಯಪ್ ಸಿದ್ಧಪಡಿಸಲಾಗಿದೆ ಎಂದು ಆ್ಯಪ್ ಸಿದ್ಧಪಡಿಸಿದ ಅನುದೀಪ್ ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಮಾತನಾಡಿ, ಈಗಾಲೇ ಜಿಲ್ಲಾದ್ಯಂತ ತ್ಯಾಜ್ಯ ಎಸೆಯುವವರಿಗೆ ದಂಡ ವಿಧಿಸಲಾಗುತ್ತಿದೆ. ಎಸ್‌ಎಲ್‌ಆರ್‌ಎಂ ಟಕಗಳು ಕಾರ್ಯನಿರ್ವಹಿಸುತ್ತಿದ್ದು, ತ್ಯಾಜ್ಯ ಎಸೆದವರ ಮಾಹಿತಿ ಹಂಚಿಕೊಳ್ಳಲು ಆ್ಯಪ್ ಸಿದ್ಧಪಡಿಸಲಾಗಿದೆ. ತ್ಯಾಜ್ಯದ ಫೋಟೋ ಅಪ್ಲೋಡ್ ಮಾಡಿದರೆ ಪಟ್ಟಣ ಪಂಚಾಯಿತಿಗೆ ಮಾಹಿತಿ ರವಾನೆಯಾಗಿ ಅದನ್ನು ಸ್ಪಚ್ಛಗೊಳಿಸುವ ಕೆಲಸ ಮಾಡಲಾಗುವುದು ಎಂದರು. ಮುಖ್ಯಾಧಿಕಾರಿ ಅಜೇಯ್ ಭಂಡಾರ್ಕರ್ ಮಾತನಾಡಿ, ಪಪಂ ಅಭಿವೃದ್ಧಿಗೆ ಸಾಕಷ್ಟು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.