ಗುಣಮಟ್ಟದ ಕಾಮಗಾರಿಗೆ ಸ್ಥಳೀಯರ ಸಹಕಾರ ಮುಖ್ಯ

 ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸುಳ್ಯ ಬಿಜೆಪಿ ಮಂಡಲ ಕಾರ್ಯದರ್ಶಿ ಗಣೇಶ್ ಉದನಡ್ಕ ಮೊದಲಾದವರಿದ್ದರು.
ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸುಳ್ಯ ಬಿಜೆಪಿ ಮಂಡಲ ಕಾರ್ಯದರ್ಶಿ ಗಣೇಶ್ ಉದನಡ್ಕ ಮೊದಲಾದವರಿದ್ದರು.
Published on
ಕಡಬ: ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಸ್ಥಳೀಯ ಫಲಾನುಭವಿಗಳು ಸಂಪೂರ್ಣ ಸಹಕಾರ ನೀಡುವ ಮೂಲಕ ಗುಣಮಟ್ಟದ ಕಾಮಗಾರಿಗೆ ಮುತುವರ್ಜಿ ವಹಿಸಬೇಕು. ರಸ್ತೆ ಶೀಘ್ರ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಲಿ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಶಾಸಕರ 10 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣವಾಗಲಿರುವ ತಾಲೂಕಿನ ಕುದ್ಮಾರು ಗ್ರಾಮದ ಪಟ್ಟೆಸೌತೆಮಾರು ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸುಳ್ಯ ಬಿಜೆಪಿ ಮಂಡಲ ಕಾರ್ಯದರ್ಶಿ ಗಣೇಶ್ ಉದನಡ್ಕ, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಲಲಿತಾ ಈಶ್ವರ, ಪಂಚಾಯಿತಿ ಮಾಜಿ ಸದಸ್ಯ ಪ್ರವೀಣ್ ಕೆರೆನಾರು, ಸುರೇಶ್ ರೈ ಸೂಡಿಮುಳ್ಳು, ಅನಿಲ್ ಖಂಡಿಗ, ಸ್ಥಳೀಯ ಫಲಾನುಭವಿಗಳು ಉಪಸ್ಥಿತರಿದ್ದರು. ಲೋಕೇಶ್ ಬಿ.ಎನ್. ಸ್ವಾಗತಿಸಿ, ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net