ಲೋಕಾಯುಕ್ತ ಪೊಲೀಸರು ಶ್ರೀನಿವಾಸ್ ಅವರಿಗೆ ಸೇರಿದ ನಿವಾಸ, ಕಚೇರಿ ಹಾಗೂ ಅವರ ಸಂಬಂಧಿಕರ ಮನೆಗಳೂ ಸೇರಿ ಒಟ್ಟು 15 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದರು.
6.90 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ
11 ನಿವೇಶನಗಳು, 6 ವಾಸದ ಮನೆಗಳು ಹಾಗೂ 31 ಎಕರೆ ಕೃಷಿ ಭೂಮಿಯನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಇವುಗಳ ಮೌಲ್ಯ ಸುಮಾರು 6.90 ಕೋಟಿ ರು ಎಂದು ಅಂದಾಜಿಸಲಾಗಿದೆ.
2.66 ಕೋಟಿ ರೂ. ಚರಸ್ತಿ
3.95 ಲಕ್ಷ ರೂ. ನಗದು, 1.47 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳು, 17 ಲಕ್ಷ ರೂ. ಮೌಲ್ಯದ ವಾಹನಗಳು, 25.75 ಲಕ್ಷ ರೂ. ಬ್ಯಾಂಕ್ ಠೇವಣಿ ಹಾಗೂ 72.68 ಲಕ್ಷ ರೂ. ಮೌಲ್ಯದ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಶ್ರೀನಿವಾಸ್ ಅವರು ಸುಮಾರು 8,69,23,435 ರೂಪಾಯಿಗಳಷ್ಟು ಅಸಮತೋಲಿತ ಆಸ್ತಿಯನ್ನು ಹೊಂದಿದ್ದಾರೆ ಎಂದು ಲೋಕಾಯುಕ್ತ ಪ್ರಕಟಣೆ ತಿಳಿಸಿದೆ. ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.