ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಲೋಕಾಯುಕ್ತ ಪೊಲೀಸರು ಆದಿಉಡುಪಿಯಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸಿದ್ದಾರೆ
ಲೋಕಾಯುಕ್ತ ಪೊಲೀಸರು ಆದಿಉಡುಪಿಯಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸಿದ್ದಾರೆ
Published on
ಉಡುಪಿ: ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ಸರ್ಚ್​ ವಾರಂಟ್​ ಪಡೆದು ಶುಕ್ರವಾರ ಕಡತಗಳ ಪರಿಶೀಲನೆ ನಡೆಸಿದ್ದಾರೆ.
ಸಾವಿರಕ್ಕೂ ಅಧಿಕ ಕಡತಗಳ ವಿಲೇವಾರಿಗೆ ಬಾಕಿಯಿದ್ದು, ಶುಕ್ರವಾರ 250ಕ್ಕೂ ಅಧಿಕ ಕಡತಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ. ನಿಯಮ ಬಾಹಿರವಾಗಿ ವಿಲೇವಾರಿ ಮಾಡಿದ ಕಡತಗಳು ಕಂಡುಬಂದಿದ್ದು, ಈ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಮುಂದಿನ ಕಾನೂನು ಕ್ರಮಕ್ಕೆ ಲೋಕಾಯುಕ್ತರಿಗೆ ವಿವರವಾದ ವರದಿ ಸಲ್ಲಿಸಲಿದ್ದಾರೆ. ಶನಿವಾರವೂ ಕಡತ ಪರಿಶೀಲನೆ ಮುಂದುವರಿಯಲಿದೆ.
ಮಂಗಳೂರು ಲೋಕಾಯುಕ್ತ ಎಸ್​.ಪಿ ದಿನೇಶ್​ ಕುಮಾರ್​ ಮಾರ್ಗದರ್ಶನದಲ್ಲಿ, ಉಡುಪಿ ಲೋಕಾಯುಕ್ತ ಡಿ.ವೈ.ಎಸ್​.ಪಿ ಹಾಲಮೂರ್ತಿ ರಾವ್​, ಪೊಲೀಸ್​ ಇನ್ಸ್​ಪೆಕ್ಟರ್​ ರಾಜೇಂದ್ರ ನಾಯ್ಕ್​ ಹಾಗೂ ಮಂಗಳೂರು ಲೋಕಾಯುಕ್ತ ಇನ್ಸ್​ಪೆಕ್ಟರ್​ ಭಾರತಿ ಮತ್ತು 16 ಮಂದಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net