ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವದಲ್ಲಿ ಸೋನಿಯಾ ವರ್ಮಾ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ನಿರ್ದೇಶಕ ಬಿ.ಪಿ. ಸಂಪತ್ ಕುಮಾರ್ ಜೈನ್ ಮತ್ತಿತರರಿದ್ದರು.
ಸಂಸ್ಕಾರ, ಉತ್ತಮ ಮೌಲ್ಯಗಳಿದ್ದರೆ ನೆಮ್ಮದಿಯಿಂದ ಬದುಕಬಹುದು ಎಂಬುದಕ್ಕೆ ಶ್ರೀಕೃಷ್ಣನ ಜೀವನವೇ ಸಾಕ್ಷಿ. ಫಲಾಪೇಕ್ಷೆಯಿಲ್ಲದೆ ಪ್ರಾಮಾಣಿಕತೆ, ನಿಷ್ಠೆ, ಧರ್ಮದ ಹಾದಿಯಲ್ಲಿ ಜೀವನ ನಡೆಸಿದಾಗ ಭಗವಂತನ ಅನುಗ್ರಹ ಸದಾ ನಮ್ಮೊಂದಿಗಿರುತ್ತದೆ ಎಂದು ಹೇಳಿದ ಕೃಷ್ಣನ ಆದರ್ಶಗಳು ಬದುಕಿಗೆ ದಾರಿದೀಪವಾಗಲಿ ಎಂದು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಹೇಳಿದರು.
ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ರಾಜಸಭಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಸ್ಥೆಯ ಎಸ್‌ಡಿಎಂ ಕಲಾ ಕೇಂದ್ರದ ಮುಖ್ಯ ಸಲಹೆಗಾರರಾದ ಸೋನಿಯಾ ವರ್ಮಾಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಶ್ರೀಕೃಷ್ಣನ ಜೀವನ ಮೌಲ್ಯಗಳು, ಧರ್ಮ, ಸಂಸ್ಕೃತಿಯ ಮಹತ್ವವನ್ನು ವಿವರಿಸಿದರು.
ಸಂಸ್ಥೆಯ ನಿರ್ದೇಶಕ ಬಿ.ಪಿ.ಸಂಪತ್ ಕುಮಾರ್ ಜೈನ್, ನೃತ್ಯ ಸಂಯೋಜಕ ರೂಪೇಶ್ ಶೆಟ್ಟಿ, ಮುಖ್ಯಶಿಕ್ಷಕ ಶಿವಪ್ರಸಾದ್ ಭಟ್, ಉಪಮುಖ್ಯ ಶಿಕ್ಷಕ ಜಯಶೀಲ, ಸಿಬಿಎಸ್‌ಇ ವಿಭಾಗದ ಸಂಯೋಜಕಿ ವಿಮಲಾ ಶೆಟ್ಟಿ, ಉದ್ಯಮಿಗಳಾದ ಅಪೇಕ್ಷಾ ಜೈನ್, ಲೀಲೇಶ್ ಕೋಟ್ಯಾನ್ ಉಪಸ್ಥಿತರಿದ್ದರು. ಸಾನ್ವಿ, ಮಾನಸ ನಿರೂಪಿಸಿದರು. ಮೌಲ್ಯ ವೈ.ಆರ್.ಜೈನ್ ಅತಿಥಿಗಳನ್ನು ಪರಿಚಯಿಸಿದರು.
ಭಾರತೀಯ ಸಂಸ್ಕೃತಿ, ಮೌಲ್ಯಗಳ ಅರಿವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಅಗತ್ಯ. ಪ್ರತಿ ಮಗುವಿನಲ್ಲಿ ವಿಶೇಷ ಸಾಮರ್ಥ್ಯ ಅಡಗಿದ್ದು, ಸಾಮಾನ್ಯ ಬಿದಿರು ಸುಂದರ ಕೊಳಲಾಗಿ ರೂಪುಗೊಳ್ಳುವಂತೆ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಜವಾಬ್ದಾರಿ ಶಿಕ್ಷಕರು, ಪಾಲಕರ ಮೇಲಿದೆ.