ಕೆಎಸ್ಸಾರ್ಟಿಸಿ ಬಸ್‌ಗೆ ಲಾರಿ ಡಿಕ್ಕಿ

 ಕೆಎಸ್ಸಾರ್ಟಿಸಿ ಬಸ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿರುವುದು.
ಕೆಎಸ್ಸಾರ್ಟಿಸಿ ಬಸ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿರುವುದು.
Published on
ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಮೂವರು ಬಸ್ ಪ್ರಯಾಣಿಕರು ಗಾಯಗೊಂಡ ಘಟನೆ ಉಪ್ಪಿನಂಗಡಿಯ ಬಳಿಯ ಶ್ರೀ ಸಹಸ್ರಲಿಂಗೇಶ್ವರ-ಮಹಾಕಾಳಿ ದೇವಾಲಯದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ.
ಬಸ್‌ನಲ್ಲಿದ್ದ ಪ್ರಯಾಣಿಕರಾದ ಜಲಜಾ, ಮಮತಾ, ತಾರನಾಥ ಎಂಬುವರು ಗಾಯಗೊಂಡಿದ್ದು, ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ. ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net