ಸ್ಕೂಟರ್ ಸವಾರರಿಗೆ ಸಣ್ಣಪುಟ್ಟ ಗಾಯವಾಗಿದೆ. ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಗುಚಿ ಬಿದ್ದ ಪರಿಣಾಮ ಲಾರಿಯಲ್ಲಿದ್ದ ಕಲ್ಲಂಗಡಿಯೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದು ಅಪಾರ ನಷ್ಟ ಉಂಟಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ.