ಸತ್ಯ, ಜ್ಞಾನದ ಬೆಳಕು ತೋರಿದ ಸಂತ

ಉಡುಪಿಯಲ್ಲಿ ಆಯೋಜಿಸಿದ್ದ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮವನ್ನು ಎಂ.ಎ. ಗಫೂರ್ ಉದ್ಘಾಟಿಸಿದರು. ಅಬೀದ್​ ಗದ್ಯಾಳ್​, ಪೂರ್ಣಿಮಾ, ಕುಮಾರ್​ ಕೆ.ಎಂ., ಸಂತೋಷ್​ ರಾಥೋಡ್​, ಮನೋಹರ್​ ಲಮಾಣಿ ಇತರರಿದ್ದರು.
ಉಡುಪಿಯಲ್ಲಿ ಆಯೋಜಿಸಿದ್ದ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮವನ್ನು ಎಂ.ಎ. ಗಫೂರ್ ಉದ್ಘಾಟಿಸಿದರು. ಅಬೀದ್​ ಗದ್ಯಾಳ್​, ಪೂರ್ಣಿಮಾ, ಕುಮಾರ್​ ಕೆ.ಎಂ., ಸಂತೋಷ್​ ರಾಥೋಡ್​, ಮನೋಹರ್​ ಲಮಾಣಿ ಇತರರಿದ್ದರು.
Published on

* ಎಂ.ಎ. ಗಫೂರ್​ ಮೆಚ್ಚುಗೆ

* ಸೇವಾಲಾಲ ಜಯಂತಿ ಉದ್ಘಾಟನೆ

ಉಡುಪಿ: ಸಂತ ಸೇವಾಲಾಲರು ಸತ್ಯ, ನಿಷ್ಠೆ ಮತ್ತು ಪ್ರಾಮಾಣಿಕತೆಗೆ ಹೆಸರಾದವರು. ಉಪದೇಶಗಳ ಮೂಲಕ ಜನರಲ್ಲಿದ್ದ ಮೂಢನಂಬಿಕೆ ಹೋಗಲಾಡಿಸಿ ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ. ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದ ಅವರು ನಾಡಿಗೆ ಅನೇಕ ಕೊಡುಗೆ ನೀಡಿದ್ದಾರೆ. ಬಂಜಾರ ಸಮುದಾಯ ಒಗ್ಗೂಡಿಸಿ, ಶಕ್ತಿ ತುಂಬಿ ಜ್ಞಾನದ ಬೆಳಕು ಕೊಟ್ಟವರು ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್​ ಮೆಚ್ಚುಗೆ ವ್ಯಕ್ತಪಡಿಸಿದರು.
ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೃಷ್ಣನಗರಿ ಶ್ರೀ ಸಂತ ಸೇವಾಲಾಲ ಬಂಜಾರ ಸಂಘ ಉಡುಪಿ ಜಿಲ್ಲೆ ಆಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಳತ್ತೂರು ಪಿಕೆಎಸ್​ ಪ್ರೌಢಶಾಲೆಯ ಸಹಶಿಕ್ಷಕ ಸಂತೋಷ್​ ರಾಥೋಡ್​ 'ಶ್ರೀ ಸಂತ ಸೇವಾಲಾಲರ ಜೀವನ' ಕುರಿತು ವಿಶೇಷ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿನಿ ಅಂಜಲಿಯನ್ನು ಸನ್ಮಾನಿಸಲಾಯಿತು.
ಉಡುಪಿ ಜಿಲ್ಲಾ ಕೃಷ್ಣನಗರಿ ಶ್ರೀ ಸಂತ ಸೇವಾಲಾಲ ಬಂಜಾರ ಸಂಘದ ಅಧ್ಯಕ್ಷ ಕುಮಾರ್​ ಕೆ.ಎಂ. ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಇಲಾಕೆಯ ವರ್ಷಾ ಬಿ. ಕೋಟ್ಯಾನ್​ ಕಾರ್ಯಕ್ರಮ ನಿರೂಪಿಸಿದರು. ಸಂದ ಪ್ರಧಾನ ಕಾರ್ಯದರ್ಶಿ ಮನೋಹರ್​ ಲಮಾಣಿ ವಂದಿಸಿದರು.
"

ಭಕ್ತಿಪಂಥದ ಕಾಲದಲ್ಲಿ ಸಮಾಜದ ವ್ಯವಸ್ಥೆ ತಿದ್ದಲು ಶ್ರಮಿಸಿದ ಸಂತ ಸೇವಾಲಾಲರು ಬುಡಕಟ್ಟು ಜನರಲ್ಲಿ ಧೈರ್ಯ ಮತ್ತು ಆತ್ಮಸ್ಥೈರ್ಯ ಮೂಡಿಸಿದರು. ಮಹಾನ್​ ದಾರ್ಶನಿಕರಾಗಿದ್ದ ಅವರ ಮಾರ್ಗದರ್ಶನದಂತೆ ಇಂದಿನ ಪೀಳಿಗೆ ಉತ್ತಮ ಶಿಕ್ಷಣ ಪಡೆದು ಸಮಾಜದ ಏಳಿಗೆಗೆ ಶ್ರಮಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net