ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ.
ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ.
Published on

* ಮಹಾಲಕ್ಮೀ ಕೋ-ಆಪರೇಟಿವ್​ ಬ್ಯಾಂಕ್​ ವತಿಯಿಂದ

ಉಡುಪಿ: ಮಹಾಲಕ್ಮೀ ಕೋ-ಆಪರೇಟಿವ್​ ಬ್ಯಾಂಕ್​ ಲಿ. ಉಡುಪಿ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಹಾಗೂ ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ತಿಳಿಸಿದ್ದಾರೆ.
ಬ್ಯಾಂಕಿನ ಸದಸ್ಯರ ಮಕ್ಕಳು 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಶೇ.90, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 85 ಹಾಗೂ 2025ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.75 ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ. 70 ಹಾಗೂ ಮೇಲ್ಪಟ್ಟು ಅಂಕಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಇನ್ನಿತರ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಶೇ. 95, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಹಾಗೂ 2025ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.80 ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.75 ಹಾಗೂ ಮೇಲ್ಪಟ್ಟು ಅಂಕ ಗಳಿಸಿರಬೇಕು.
ಪ್ರತಿಭಾ ಪುರಸ್ಕಾರದ ಅರ್ಜಿಗಳು ಮಹಾಲಕ್ಮೀ ಕೋ-ಆಪರೇಟಿವ್​ ಬ್ಯಾಂಕಿನ ಎಲ್ಲ ಶಾಖೆ ಹಾಗೂ ಬ್ಯಾಂಕಿನ ಅಧಿಕೃತ ವೆಬ್ ಸೈಟ್ www.mahalakshmicoopbank.comನಲ್ಲಿ ಲಭ್ಯವಿದ್ದು, ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕು ಎಂದು ಯಶ್​ಪಾಲ್​ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net