ಜೀವನದಲ್ಲಿ ವಿನಯ, ಸರಳತೆ ಕಾಪಾಡಿಕೊಳ್ಳಿ

ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅತ್ಯುತ್ತಮ ಪ್ರಾಜೆಕ್ಟ್​ಗಳಿಗೆ ಬಹುಮಾನ ನೀಡಲಾಯಿತು.
ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅತ್ಯುತ್ತಮ ಪ್ರಾಜೆಕ್ಟ್​ಗಳಿಗೆ ಬಹುಮಾನ ನೀಡಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಡಾ.ರಾಧಾಕೃಷ್ಣ ಎಸ್​.ಐತಾಳ್​ ಸಲಹೆ
  • ಬಂಟಕಲ್ಲು ಕಾಲೇಜಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
ವಿಜಯವಾಣಿ ಸುದ್ದಿಜಾಲ ಶಿರ್ವ
ವಿದ್ಯಾರ್ಥಿಗಳ ವಿನಯಶೀಲತೆ ಅವರ ವ್ಯಕ್ತಿತ್ವ ಮತ್ತು ಪದವಿಯ ಮೌಲ್ಯವನ್ನು ಹೆಚ್ಚಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸದಾ ವಿನಯ ಮತ್ತು ಸರಳತೆಯನ್ನು ಕಾಪಾಡಿಕೊಳ್ಳಬೇಕು ಎಂದು ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರಾಧಾಕೃಷ್ಣ ಎಸ್​.ಐತಾಳ್​ ಹೇಳಿದರು.

ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ:

ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಯೋಜಿಸಲಾಗಿದ್ದ 13ನೇ ವರ್ಷದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಬಲಿಷ್ಠ ಹಳೇ ವಿದ್ಯಾರ್ಥಿಗಳ ಸಂಘ ಅಗತ್ಯ:

ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನ ಕಾರ್ಯದರ್ಶಿ ರತ್ನ ಕುಮಾರ್​ ಮಾತನಾಡಿ, ವಿದ್ಯಾರ್ಥಿಗಳು ಉದ್ಯಮಿಗಳಾಗಿ ಇತರರಿಗೆ ಉದ್ಯೋಗಾವಕಾಶಗಳನ್ನು ನೀಡಬೇಕು. ಜತೆಗೆ ಸಂಸ್ಥೆಗೆ ಬಲಿಷ್ಠ ಹಳೇ ವಿದ್ಯಾರ್ಥಿಗಳ ಸಂಘ ನಿರ್ಮಿಸುವ ಅಗತ್ಯವಿದ್ದು, ಸಂಸ್ಥೆಯೊಂದಿಗೆ ಕೈ ಜೋಡಿಸಬೇಕು ಎಂದರು.

ಅತ್ಯುತ್ತಮ ಪ್ರಾಜೆಕ್ಟ್​ಗಳಿಗೆ ಬಹುಮಾನ:

ಸಂಸ್ಥೆ ಪ್ರಾಂಶುಪಾಲ ಡಾ.ನಾಗರಾಜ್​ ಭಟ್​ ಮಾತನಾಡಿದರು. ಅಂತಿಮ ವರ್ಷದ ವಿದ್ಯಾರ್ಥಿಗಳ ಅತ್ಯುತ್ತಮ ಪ್ರಾಜೆಕ್ಟ್​ಗಳಿಗೆ ಬಹುಮಾನ ನೀಡಲಾಯಿತು. ಉಪನ್ಯಾಸಕರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net