ಶಾಸಕ ಯಶ್ಪಾಲ್ ಎ ಸುವರ್ಣ ಮಾತನಾಡಿ, ಕರಾವಳಿ ಭಾಗದ ಮೀನುಗಾರರು ತಮ್ಮ ಜೀವದ ಹಂಗು ತೊರೆದು ಮೀನುಗಾರಿಕಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. 330 ಕಿ.ಮೀ ಕರಾವಳಿ ಭಾಗ ಹೊಂದಿರುವ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರ ಧ್ವನಿಯಾಗಿ ಮಲ್ಪೆ ಮೀನುಗಾರರ ಸಂಘವು ಕೆಲಸ ಮಾಡುತ್ತಿದೆ. ಮೀನುಗಾರಿಕೆಯು ಕರಾವಳಿ ಭಾಗದ ಆರ್ಥಿಕತೆಗೆ ಹಾಗೂ ಜಿ.ಡಿ.ಪಿ ಹೆಚ್ಚಳಕ್ಕೆ ಕೊಡುಗೆ ನೀಡುತ್ತಿದ್ದು, ಕರಾವಳಿ ಭಾಗಕ್ಕೆ ಉತ್ತಮ ಯೋಜನೆ ರೂಪಿಸಿ, ಹೆಚ್ಚಿನ ಅನುದಾನ ಒದಗಿಸಿದ್ದಲ್ಲಿ ಮೀನುಗಾರಿಕಾ ಚಟುವಟಿಕೆ ಮತ್ತಷ್ಟು ಪ್ರಾಬಲ್ಯ ಹೊಂದಲು ಸಾಧ್ಯವಾಗಲಿದೆ ಎಂದರು.