ಹಾವು ಕಚ್ಚಿ ಚಿಕಿತ್ಸೆ ಪಡೆಯುತ್ತಿದ್ದಾತ ಸಾವು

Death
Death
Published on
ಬೈಂದೂರು: ಕೃಷಿ ಚಟುವಟಿಕೆ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಚಿಕಿತ್ಸೆ ಪಡೆಯುತ್ತಿದ್ದ ಯಡ್ತರೆ ಗ್ರಾಮದ ತೂದಳ್ಳಿ ನಿವಾಸಿ ವಿಜಯ ಆಚಾರಿ(70) ಎಂಬುವರು ಚಿಕಿತ್ಸೆ ಲಕಾರಿಯಾಗದೆ ಯಡ್ತರೆಯಲ್ಲಿ ಮೃತಪಟ್ಟಿದ್ದಾರೆ.
ಆ.29ರಂದು ಸಂಜೆ ತೂದಳ್ಳಿ ಎಂಬಲ್ಲಿ ಕೃಷಿ ಕೆಲಸ ವಾಡುತ್ತಿದ್ದ ವೇಳೆ ವಿಷಕಾರಿ ಹಾವು ಕಾಲಿಗೆ ಕಚ್ಚಿತ್ತು. ಕೂಡಲೇ ಅವರನ್ನು ಬೈಂದೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net