ಉಜಿರೆ: ನಮ್ಮ ಬದುಕಿನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರ ನಿರ್ವಹಣೆಗೆ ಹೆಚ್ಚಿನ ಮಹತ್ವ ಹಾಗೂ ಆದ್ಯತೆ ಇದೆ. ಪ್ರಾಚೀನ ಕಾಲದಲ್ಲಿ ಜನರು ತಮ್ಮದೇ ಆದ ತತ್ವ-ಸಿದ್ಧಾಂತಗಳು, ಧಾರ್ಮಿಕ ನಂಬಿಕೆ, ಆಧ್ಯಾತ್ಮಿಕ ಚಿಂತನ-ಮಂಥನದೊಂದಿಗೆ, ಸತ್ಯ, ಧರ್ಮ, ನ್ಯಾಯ-ನೀತಿಯ ಮಾರ್ಗದಲ್ಲಿ ನಡೆದು ನೆಮ್ಮದಿಯ ಜೀವನ ನಡೆಸುತ್ತಿದ್ದರು. ಧರ್ಮ ಮತ್ತು ಅಧ್ಯಾತ್ಮ ಭಾರತೀಯರ ಆತ್ಮದಷ್ಟೇ ಮುಖ್ಯವಾಗಿದೆ ಎಂದು ಜಾಮ್ನಗರ್‌ನಲ್ಲಿರುವ ಆಯುಷ್ ಇಲಾಖೆಯ ಆಯುರ್ವೇದ ಸಂಶೋಧನಾ ಸಂಸ್ಥೆಯ ಯೋಗ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಅರ್ಪಣ್ ಎ.ಭಟ್ ಹೇಳಿದರು.