ಕ್ರೀಡಾಪಟುಗಳು ದೇಶದ ಬಹುದೊಡ್ಡ ಆಸ್ತಿ: ಯಶ್​ಪಾಲ್​ ಸುವರ್ಣ

ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್​ ಕಾಲೇಜು ಕ್ರೀಡಾಕೂಟವನ್ನು ಶಾಸಕ ಯಶ್​ಪಾಲ್​ ಎ. ಸುವರ್ಣ ಉದ್ಘಾಟಿಸಿದರು.
ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್​ ಕಾಲೇಜು ಕ್ರೀಡಾಕೂಟವನ್ನು ಶಾಸಕ ಯಶ್​ಪಾಲ್​ ಎ. ಸುವರ್ಣ ಉದ್ಘಾಟಿಸಿದರು.
Published on
ಉಡುಪಿ: ಕ್ರೀಡಾಪಟುಗಳು ದೇಶದ ಬಹು ದೊಡ್ಡ ಆಸ್ತಿ. ಇವರ ಯೋಗದಾನವನ್ನು ನಾವು ಹಲವು ಕ್ಷೇತ್ರಗಳಲ್ಲಿ ಕಾಣಬಹುದಾಗಿದೆ. ಕ್ರೀಡೆ ಮತ್ತು ಕ್ರೀಡಾಪಟುಗಳಿಗೆ ಉತ್ತಮ ಅವಕಾಶಗಳು ಲಭ್ಯವಿದ್ದು, ಇದರ ಪ್ರಯೋಜನ ನಾಡಿನ ಸಮಸ್ತ ಕ್ರೀಡಾಳುಗಳಿಗೆ, ಕ್ರೀಡಾ ಆಸಕ್ತರಿಗೆ ಸಿಗುವಂತಾಗಬೇಕು ಎಂದು ಶಾಸಕ ಯಶ್​ಪಾಲ್​ ಎ. ಸುವರ್ಣ ಹೇಳಿದರು.

ಮಂಗಳವಾರ ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ ಮತ್ತು ಅಜ್ಜರಕಾಡು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಆಶ್ರಯದಲ್ಲಿ ಜಿಲ್ಲಾ ಮಹಾತ್ಮ ಗಾಂಧೀಜಿ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್​ ಕಾಲೇಜು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಮಂಗಳೂರು ವಿವಿ ಕ್ರೀಡಾ ವಿಭಾಗದ ಜಂಟಿ ನಿರ್ದೇಶಕಿ ಪ್ರೊ. ಕೆ.ಆರ್​. ಕವಿತಾ ಮಾತನಾಡಿ ಕ್ರೀಡೆಯಲ್ಲಿ ಶಿಸ್ತು ಬಹಳ ಮುಖ್ಯ. ಕ್ರೀಡಾಳುಗಳು ಸೋಲು ಮತ್ತು ಗೆಲುವನ್ನು ಸಮಾನ ಮನಸ್ಸಿನಿಂದ ಸ್ವೀಕರಿಸಿದರೆ ಮಾತ್ರ ಕ್ರೀಡೆ ಜಯಗಳಿಸುತ್ತದೆ ಎಂದರು.

ಮಂಗಳೂರು ವಿಶ್ವವಿದ್ಯಾನಿಲಯದ ಉಪ ಕಲಪತಿಗಳಾಗಿ ಸೇವೆಯನ್ನು ಸಲ್ಲಿಸಿ ಇತ್ತೀಚೆಗೆ ನಿಧನರಾದ ಪ್ರೊ. ಕಿಶೋರ್​ ಕುಮಾರ್​ ಸಿ. ಕೆ ಅವರ ಸ್ಮರಣಾರ್ಥ ಬೆಳ್ಳಿಯ ಚಾಂಪಿಯನ್ಸ್​ ಟ್ರೋಫಿಯನ್ನು ಅನಾವರಣ ಮಾಡಲಾಯಿತು. ಅಮೆಚೂರ್​ ಅಥ್ಲೆಟಿಕ್​ ಅಸೋಶಿಯೇಶನ್​ನ ಅಧ್ಯಕ್ಷ ಹರಿಪ್ರಸಾದ್​ ರೈ ಪಥಸಂಚಲನ ಮತ್ತು ಧ್ವಜವಂದನೆ ಸ್ವೀಕರಿಸಿದರು. ವಿದ್ಯಾರ್ಥಿನಿ ಪ್ರಗತಿ ಕ್ರೀಡಾ ಪ್ರತಿಜ್ಞವಿಧಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಸೋಜನ್​ ಕೆ. ಜಿ ವಹಿಸಿದ್ದರು.

ಅರುಣ ಕಿಶೋರ್​ ಕುಮಾರ್​, ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಜೆರಾಲ್ಡ್​ ಸಂತೋಷ್​ ಡಿಸೋಜ, ಯುವ ಸವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ನಿರ್ದೇಶಕ ಡಾ. ರೋಶನ್​ ಕುಮಾರ್​ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್​ ಸ್ವಾಗತಿಸಿದರು. ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಪ್ರವಿಣ್​ ಕಾರ್ಯಕ್ರಮ ನಿರೂಪಿಸಿ, ಕಾಲೇಜಿನ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿ ಪ್ರೊ. ನಿಕೇತನ ವಂದಿಸಿದರು.
ಸ್ಪರ್ಧೆಯಲ್ಲಿ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ, ಡಾ. ಜಿ ಶಂಕರ್​ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ದ್ವೀತಿಯ ಮತ್ತು ಪೂರ್ಣಪ್ರಜ್ಞ ಕಾಲೇಜು ತೃತೀಯ ಬಹುಮಾನವನ್ನು ಪಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net