ಮಂಗಳೂರು ತಾಲೂಕು ಕಾರ್ಯಪಡೆ ಸಭೆ

 ಪ್ರಕೃತಿ ವಿಕೋಪ, ಬರ ಪರಿಸ್ಥಿತಿ, ಜಾನುವಾರು ಮೇವು, ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಮಂಗಳೂರು ತಾಲೂಕು ಟಾಸ್‌‌ಕೆೆರ್ಸ್ ಸಭೆ ಶಾಸಕ ಡಾ.ಭರತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಗುರುವಾರ ತಾಪಂ ಸಭಾಂಗಣದಲ್ಲಿ ನಡೆಯಿತು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ(ಇಒ) ಮಹೇಶ್ ಹೊಳ್ಳ, ತಹಸೀಲ್ದಾರ್ ರಮೇಶ್ ಬಾಬು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Published on
ಗುರುಪುರ: ಪ್ರಸಕ್ತ ಸಾಲಿನ(2026-27ನೇ) ಮುಂಗಾರು ಅವಧಿಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ, ಬರ ಪರಿಸ್ಥಿತಿ, ಜಾನುವಾರು ಮೇವು, ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಮಂಗಳೂರು ತಾಲೂಕು ಟಾಸ್‌‌ಕೆೆರ್ಸ್ ಸಭೆ ಶಾಸಕ ಡಾ.ಭರತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಗುರುವಾರ ತಾಪಂ ಸಭಾಂಗಣದಲ್ಲಿ ನಡೆಯಿತು.
ನೀರಿನ ಅಭಾವ ಉಂಟಾಗುವ ಪ್ರದೇಶಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಬಳಿಕ ಶಾಸಕ ಡಾ.ಭರತ್ ಶೆಟ್ಟಿ ಮಾತನಾಡಿ, ಅಗತ್ಯವಿರುವ ಓವರ್‌ಹೆಡ್ ಟ್ಯಾಂಕ್, ಕೊಳವೆಬಾವಿ, ಪೈಪ್‌ಲೈನ್, ವಿದ್ಯುತ್ ಸಂಪರ್ಕದ ಮಾಹಿತಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಶಿಥಿಲಾವಸ್ಥೆಯಲ್ಲಿರುವ ಶಾಲೆಗಳು, ಅಂಗನವಾಡಿ ಕಟ್ಟಡಗಳ ಬಗ್ಗೆ ಪರಿಶೀಲನೆ ನಡೆಸಿ ಮಕ್ಕಳ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳ ಮಾಹಿತಿ ಪಡೆದುಕೊಂಡ ಅವರು, ಅಪಾಯಕಾರಿ ಮರ, ಕೊಂಬೆಗಳನ್ನು ತೆರವುಗೊಳಿಸಲು ಮೆಸ್ಕಾಂ ಹಾಗೂ ಅರಣ್ಯ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು. ಯಾವುದೇ ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳನ್ನು ಸಮರ್ಥವಾಗಿ ಎದುರಿಸಲು ಎಲ್ಲ ಇಲಾಖೆಗಳು ಸದಾ ಸನ್ನದ್ಧವಾಗಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿ(ಇಒ) ಮಹೇಶ್ ಹೊಳ್ಳ, ತಹಸೀಲ್ದಾರ್ ರಮೇಶ್ ಬಾಬು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net