ಬಳಿಕ ಆರೋಪಿಗಳನ್ನು ಕೋರ್ಟ್ಗೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿದ್ದು, ಆರೋಪಿಗಳು ತಾವು ಕದ್ದ ಚಿನ್ನಾಭರಣಗಳನ್ನು ಶಿವಮೊಗ್ಗದ ಲಾಡ್ಜ್ ಒಂದರಲ್ಲಿ ರೂಮ್ ಮಾಡಿ ಬಚ್ಚಿಟ್ಟಿರುವುದಾಗಿ ತಿಳಿಸಿದ್ದಾರೆ. ತಕ್ಷಣ ಶಿವಮೊಗ್ಗಕ್ಕೆ ತೆರಳಿದ ಪೊಲೀಸರು 39.70 ಗ್ರಾಂ ತೂಕದ 5. 6 ಲಕ್ಷ ರೂ. ಮೌಲ್ಯದ ಚಿನ್ನದ ಕರಿಮಣಿ ಸರ, 1.86 ಲಕ್ಷ ರೂ. ಮೌಲ್ಯದ 13.30 ಗ್ರಾಂ ತೂಕದ ಚಿನ್ನದ ನೆಕ್ಲೆಸ್, 44,000 ಮೌಲ್ಯದ 3.15 ಗ್ರಾಂ ತೂಕದ ಚಿನ್ನದ ಕಿವಿಯೋಲೆ, 54,000 ಮೌಲ್ಯದ 3.87 ಗ್ರಾಂ ಚಿನ್ನದ ಚೈನ್ ವಶಪಡಿಸಿಕೊಂಡಿದ್ದಾರೆ. ಈ ಜಾಲದಲ್ಲಿ ಭಾಗಿಯಾಗಿರುವ ಇನ್ನುಳಿದ ಇಬ್ಬರು ಪ್ರಮುಖ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.