ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮಾತೃವೈಭವ ಉತ್ಸವ

 ಕಾಪು ಶ್ರೀ ಹೊಸ ವಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ ವಾತೃ ವೈಭವ ಉತ್ಸವ ಪೂರ್ವಭಾವಿಯಾಗಿ ಹಸಿರುವಾಣಿ ಹೊರೆಕಾಣಿಕೆ ಸಮರ್ಪಿಸಲಾಯಿತು
ಕಾಪು ಶ್ರೀ ಹೊಸ ವಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ ವಾತೃ ವೈಭವ ಉತ್ಸವ ಪೂರ್ವಭಾವಿಯಾಗಿ ಹಸಿರುವಾಣಿ ಹೊರೆಕಾಣಿಕೆ ಸಮರ್ಪಿಸಲಾಯಿತು
Published on
ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಉಚ್ಚಂಗೀ ಸಹಿತ ಶ್ರೀ ಮಾರಿಯಮ್ಮ ದೇವಿಯ ಪ್ರಥಮ ಪ್ರತಿಷ್ಠಾಪನೆ ವರ್ಧಂತಿ ಅಂಗವಾಗಿ ಮೂರು ದಿನಗಳ ಕಾಲ ನಡೆಯಲಿರುವ ಮಾತೃ ವೈಭವ ಉತ್ಸವ ಪೂರ್ವಭಾವಿಯಾಗಿ ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಿಸಲಾಯಿತು.
ಕಾಪು ದಂಡತೀರ್ಥ ಮಠದಲ್ಲಿ ಸಾಮೂಹಿಕ ಪ್ರಾರ್ಥನೆ ಬಳಿಕ ಹೊರೆಕಾಣಿಕೆ ಶೋಭಾಯಾತ್ರೆ ರಾಷ್ಟ್ರೀಯ ಹೆದ್ದಾರಿ 66ರ ಉಳಿಯಾರಗೋಳಿ ದಂಡತೀರ್ಥ ಬಳಿಯಿಂದ ಪೊಲಿಪು ಜಂಕ್ಷನ್ ಮೂಲಕವಾಗಿ ಕಾಪು ಪೇಟೆಗೆ ಬಂದು, ಅಲ್ಲಿಂದ ದೇವಸ್ಥಾನಕ್ಕೆ ತಲುಪಿತು. ವಿವಿಧ ಬಿರುದಾವಳಿ ಹಾಗೂ ಸ್ತಬ್ಧಚಿತ್ರಗಳು ಮೆರವಣಿಗೆಗೆ ರಂಗು ತುಂಬಿದವು. 50ಕ್ಕೂ ಅಧಿಕ ವಾಹನಗಳ ಮೂಲಕ ಭಕ್ತರು ಹಸಿರುವಾಣಿ ಹೊರೆಕಾಣಿಕೆ ಸಮರ್ಪಿಸಿದರು.
ಮಾಜಿ ಶಾಸಕರಾದ ವಿನಯ್ ಕುವಾರ್ ಸೊರಕೆ, ಲಾಲಾಜಿ ಆರ್.ಮೆಂಡನ್, ಶ್ರೀ ಹೊಸ ವಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿ ಕಿರಣ್, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಆಡಳಿತ ಮೊಕ್ತೇಸರ ಮನೋಹರ ಎಸ್.ಶೆಟ್ಟಿ, ಹೊರೆಕಾಣಿಕೆ ಮೆರವಣಿಗೆ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ವಾತೃವೈಭವ ಸಮಿತಿ ಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಬಾಲಾಜಿ, ದೇವಸ್ಥಾನದ ಟ್ರಸ್ಟಿಗಳಾದ ಮಾಧವ ಆರ್.ಪಾಲನ್, ಶೇಖರ್ ಸಾಲ್ಯಾನ್, ಮನೋಹರ ರಾವ್, ರವೀಂದ್ರ ಮಲ್ಲಾರು, ಜಯಲಕ್ಷ್ಮೀ ಎಸ್.ಶೆಟ್ಟಿ, ಚರಿತಾ ದೇವಾಡಿಗ, ಪ್ರಮುಖರಾದ ಕಾಪು ದಿವಾಕರ ಶೆಟ್ಟಿ, ಸುಪ್ರಸಾದ್ ಶೆಟ್ಟಿ ಬೈಕಾಡಿ, ಭಗವಾನ್ ದಾಸ್ ಶೆಟ್ಟಿಗಾರ್, ಪ್ರಭಾಕರ ಪೂಜಾರಿ, ಶ್ರೀಕರ ಶೆಟ್ಟಿ ಕಲ್ಯ, ರಮೇಶ್ ಶೆಟ್ಟಿ ಕೊಲ್ಯ, ನಿರ್ಮಲ್ ಕುವಾರ್ ಹೆಗ್ಡೆ, ವಿ.ಜಿ.ಶೆಟ್ಟಿ, ಡಾ.ಪ್ರಶಾಂತ್ ಶೆಟ್ಟಿ, ಸುಧಾಕರ ಶೆಟ್ಟಿ ಮಕರ, ರುರಾಮ ಶೆಟ್ಟಿ, ಸುನೀಲ್ ಪೂಜಾರಿ, ತುಳಸಿ ನಾರಾಯಣ್, ಮಮತಾ ಶೆಟ್ಟಿ, ಗೀತಾಂಜಲಿ ಎಂ.ಸುವರ್ಣ, ಸಾವಿತ್ರಿ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net