ಎಂಡಿಎಂಎ ಸಾಗಾಟ ಅಪರಾಧಿಗೆ ಕಠಿಣ ಜೈಲು ಶಿಕ್ಷೆ

Crime
Crime
Published on

ಕಾಸರಗೋಡು: ಬೈಕ್‌ನಲ್ಲಿ 51 ಗ್ರಾಂ ಎಂಡಿಎಂಎ ಸಾಗಾಟ ಪ್ರಕರಣದಲ್ಲಿ ಬಂಧಿತನಾಗಿದ್ದ ಮಂಜೇಶ್ವರ ನಿವಾಸಿ ಮುಹಮ್ಮದ್ ಸಮೀರ್ (43) ಎಂಬಾತನಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿದೆ.

ನ್ಯಾಯಾಧೀಶ ರಾಮು ರಮೇಶ್ ಚಂದ್ರಭಾನು ತೀರ್ಪು ನೀಡಿದ್ದಾರೆ. ದಂಡ ಪಾವತಿಸದಿದ್ದಲ್ಲಿ 6 ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕೆಂದು ತಿಳಿಸಲಾಗಿದೆ. 2021ರ ಅ.4ರಂದು ಮಂಜೇಶ್ವರ ಪ್ರದೇಶದಲ್ಲಿ ಬೈಕ್‌ನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ವೇಳೆ ಕಾಸರಗೋಡು ಅಬಕಾರಿ ಎನ್‌ಫೋರ್ಸ್‌ಮೆಂಟ್ ಮತ್ತು ಆ್ಯಂಟಿ ನಾರ್ಕೋಟಿಕ್ ಸ್ಪೆಷಲ್ ಸ್ಕ್ವಾಡ್ ತಂಡ ಬಂಧಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net